ರಾಜ್ಯ

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

2026-27ನೇ ಸಾಲಿನ ಬಜೆಟ್‌ ಮಂಡಿಸಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 2026-27ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದೇನೆ. ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದೇನೆ. ಕಳೆದ ವರ್ಷಕ್ಕಿಂತ ಈ ಬಾರಿ 38,455 ಕೋಟಿ ಹೆಚ್ಚಾಗಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ. ಕೆಲ ರಾಜ್ಯಗಳು ಇನ್ನೂ ಚೇತರಿಕೆ ಕಂಡಿಲ್ಲ. ಆದರೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ಹೇಳಿದರು.

ಕೇಂದ್ರ ಸರ್ಕೃ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯಕ್ಕೆ ಬರಬೇಕಿದ್ದ ಪಾಲು 10,000 ಕೋಟಿ ರೂ ಕಡಿಮೆಯಾಗಿದೆ. ಮುಂದೆ ಇದು 15 ಸಾವಿರ ಕೋಟಿ ರೂ ಕಡಿಮೆಯಾಗುತ್ತದೆ. ಆದರೆ ನಾವು ವಿತ್ತೀಯ ಶಿಸ್ತು ಉಲ್ಲಂಘನೆ ಮಾಡಿಲ್ಲ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

9 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

9 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

10 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

10 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

10 hours ago

ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಬಜೆಟ್‌ ಮಂಡಿಸಿ ಹೊಸ ದಾಖಲೆ ಬರೆದ ಸಿದ್ದರಾಮಯ್ಯ

ಬೆಂಗಳೂರು: ದಾಖಲೆಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಿಎಂ ಸಿದ್ದರಾಮಯ್ಯ…

10 hours ago