ಕಲಬುರಗಿ: ಬಿಜೆಪಿಯವರು ಗಲಭೆ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೇ, ನನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ ಮತ್ತು ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ
ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಈ ಲೋಕಸಭೆ ಚುನಾವಣೆಯಲ್ಲಿ ಗೊಂದಲ ಸೃಷ್ಠಿಸಿ ಚುನಾವಣೆ ಮಾಡಬೇಕು ಎಂದು ಸಂಚು ರೂಪಿಸಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ನನಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಅದರಲ್ಲಿ ನನ್ನ ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ. ಈ ಬೆದರಿಕೆ ಪತ್ರ ಫಿನ್‌ಲ್ಯಾಂಡ್‌ನಿಂದ ಬಂದಿದೆ ಎಂದು ಹೇಳಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿಯಲ್ಲಿ ಆ ಜೀವ ಬೆದರಿಕೆ ಪತ್ರವನ್ನು ಓದಿದರು. “ಪಂಚಾಮೃತದಿಂದ ಪೂಜೆ ಮಾಡಿದರೂ ನಿನ್ನ ಜಾತಿ ಬೇರೆಯಾಗುವುದಿಲ್ಲ. ಎಂತಹ ವೇಷ ಭೂಷಣ ತೊಟ್ಟರೂ ನಿನ್ನ ಜಾತಿ ಬದಲಾಗುವುದಿಲ್ಲ. ಮಂತ್ರಿಯಾಗು, ರಾಜನಾಗು, ನಿನ್ನ ಸೊಕ್ಕು ಹೊಲೆಯ ಮಾದಿಗ ಓಣಿಯಲ್ಲಿ ನಡೆಯುತ್ತೆ” ಎಂದು ಪತ್ರದಲ್ಲಿ ಆಶ್ಲೀಲ ಪದ ಬಳಸಿದ್ದಾರೆ. ಖಾಕಿಯಾದರೂ, ಖಾದಿಯಾದರೂ, ಯಾರಿಂದಲಾದರೂ ನಿನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ.
ಬೆದರಿಕೆ ಸಂಬಂಧ ಮಾರ್ಚ್ 17ರಂದು ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವಿಕಾಸಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ. ಹೆದರಿಸುವುದು ಅಥವಾ ಬೆದರಿಸಲು ಬಂದರೆ ಅದಕ್ಕೆಲ್ಲ ನಾವು ಹೆದರುವುದಿಲ್ಲ ಎಂದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…