ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು, ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು.
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.
ಇದನ್ನು ಓದಿ: ಉತ್ತಮ ಆಡಳಿತಕ್ಕೆ ಗ್ಯಾರಂಟಿ ಯೋಜನೆ ಮಾದರಿಯಾಗಿದೆ : ಡಾ. ಪುಷ್ಪ ಅಮರನಾಥ್
ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು. ಗೊತ್ತಿದ್ದೂ ಗೊತ್ತಿದ್ದೂ ಆಹಾರ ವೇಸ್ಟ್ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದರು. ಅನ್ನ ವೇಸ್ಟ್ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ ಎಂದರು.
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪ್ರಧಾನಿ ಮನ ಮೋಹನ್ ಸಿಂಗ್. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ಕಾಂಗ್ರೆಸ್ಸಿಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ಕಾಂಗ್ರೆಸ್ ಬದ್ಧತೆ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.
ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು.
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…