ರಾಜ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು, ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು.

ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಇದನ್ನು ಓದಿ: ಉತ್ತಮ ಆಡಳಿತಕ್ಕೆ ಗ್ಯಾರಂಟಿ ಯೋಜನೆ ಮಾದರಿಯಾಗಿದೆ : ಡಾ. ಪುಷ್ಪ ಅಮರನಾಥ್

ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು. ಗೊತ್ತಿದ್ದೂ ಗೊತ್ತಿದ್ದೂ ಆಹಾರ ವೇಸ್ಟ್ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದರು. ಅನ್ನ ವೇಸ್ಟ್ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌ ಎಂದರು.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪ್ರಧಾನಿ ಮನ ಮೋಹನ್ ಸಿಂಗ್. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ಕಾಂಗ್ರೆಸ್ಸಿಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ಕಾಂಗ್ರೆಸ್ ಬದ್ಧತೆ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

3 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

3 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

3 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

3 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

3 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

3 hours ago