ರಾಜ್ಯ

ದರ್ಶನ್ ಮೇಲಿನ ಗೌರವಕ್ಕೆ ಊರು ಬಿಟ್ಟಿದ್ದೆ : ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.

ಗುರುವಾರ ಸುದ್ದಿಗೋಷ್ಠಿ ನಡೆಸಿ ಅಂದು ನಡೆದ ಘಟನೆ ವಿವರಿಸಿದ್ದಾರೆ. ಈ ವೇಳೆ ಅವರು ಇಷ್ಟು ವರ್ಷಗಳ ಕಾಲ ಎಲ್ಲಿದ್ದರು ಎಂಬ ಸತ್ಯವನ್ನು ರಿವೀಲ್ ಮಾಡಿದ್ದಾರೆ. ಅಲ್ಲದೆ, ಎಲ್ಲವನ್ನೂ ಬಿಟ್ಟು ಹೋಗುವುದರ ಹಿಂದಿನ ಉದ್ದೇಶ ಏನು ಎಂಬುದನ್ನು ಅವರು ಬಹಿರಂಗಗೊಳಿಸಿದ್ದಾರೆ.

‘ನನ್ನಿಂದ ಎಷ್ಟೋ ಜನಕ್ಕೆ ತೊಂದರೆ ಆಗಿದೆ, ನೋವಾಗಿದೆ. ಅವರೆಲ್ಲರಿಗೂ ಕ್ಷಮೆ ಕೇಳುತ್ತೇನೆ’ ಎಂದು ಮಾತು ಆರಂಭಿಸಿದರು. ‘ಇಂಜಿನಿಯರಿಂಗ್ ಮುಗಿಸಿ, ಸಹಾಯಕ ನಿರ್ದೇಶಕ ಆದ ನಂತರ ದರ್ಶನ್ ಅವರ ಮ್ಯಾನೇಜರ್ ಆಗಿ ಕೆಲಸ ಮಾಡಿದೆ. ಮೊದಲ ಸಲ ಸಿನಿಮಾ ಮಾಡಿದಾಗ ಅಂದುಕೊಂಡ ರೀತಿಯಲ್ಲಿ ಕೈ ಹಿಡಿಯಲಿಲ್ಲ. ಸಿನಿಮಾ ನಿರ್ಮಾಣ ಮಾಡಿದೆ, ಡಿಸ್ಟ್ರಿಬ್ಯೂಷನ್ ಮಾಡಿದೆ, ಹೋಟೆಲ್ ಉದ್ಯಮ ಮಾಡಿದೆ. ಯಾವುದೂ ಕೈ ಹಿಡಿಯಲಿಲ್ಲ’ ಎಂದು ಮಲ್ಲಿಕಾರ್ಜುನ ಹೇಳಿದರು.

ನಂತರ ಹಲವು ವಿಷಯದಲ್ಲಿ ಕೈ ಸುಟ್ಟುಕೊಂಡೆ, ಮೈತುಂಬ ಸಾಲ ಮಾಡಿಕೊಂಡಿದ್ದೆ. ನಂತರ ಸಾಯುವ ನಿರ್ಧಾರಕ್ಕೂ ಬಂದಿದ್ದೆ, ಆದರೆ, ಸಾಯುವ ನಿರ್ಧಾರದಿಂದ ಹಿಂದೆ ಸರಿದೆ.. ‘ಅಂದು ಕುಂದಾಪರದಿಂದ ಹೊರಟೆ. ಸವದತ್ತಿಗೆ ಬಂದೆ. ನನ್ನ ಗೆಳೆಯನ ಬಳಿ ಹಣ ಪಡೆದೆ. ಕೊಲ್ಲಾಪುರ, ಸೊಲ್ಲಾಪುರ, ಉತ್ತರ ಭಾರತ ಸೇರಿದಂತೆ ಅನೇಕ ಕಡೆ ಸುತ್ತಾಡಿದೆ. ಹಲವು ಜಾಗದಲ್ಲಿ ಕೆಲವು ದಿನ ಇರುತ್ತಿದ್ದೆ, ಬಿಟ್ಟು ಹೋಗ್ತಿದ್ದೆ. ಹೋಟೆಲ್, ರೆಸಾರ್ಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಕೆಲಸ ಮಾಡಿದೆ’ ಎಂದು ಅವರು ಹೇಳಿದ್ದಾರೆ.

‘ನನಗೆ ನೇಪಾಳದಲ್ಲಿ ಒಬ್ಬ ಗೆಳೆಯನಿದ್ದ. ಅವನ ಹೋಟೆಲ್ ಇತ್ತು. ಅಲ್ಲಿ ಸಾಕಷ್ಟು ಸಮಯ ಕಳೆದೆ. ನಾನು ಬದುಕಿದ್ದೀನಿ ಅಂತ ಪತ್ನಿಗೆ ಪತ್ರ ಬರೆದೆ. ತಾಯಿಗೂ ಬರೆದೆ. ದಿನಕರ್ ಅವರನ್ನು ಕಳೆದ ವರ್ಷ ಭೇಟಿ ಮಾಡಿದೆ. ದರ್ಶನ್‌ರನ್ನು ಭೇಟಿ ಮಾಡಬೇಕಿತ್ತು. ಆಗ ನನಗೆ ಪ್ಯಾರಲಿಸಿಸ್ ಆಯ್ತು. 7 ತಿಂಗಳು ಬೆಡ್ ರೆಸ್ಟ್ ಮಾಡಬೇಕಾಯಿತು. ಮತ್ತೆ ರೆಡಿ ಆದೆ. ಒಂದೂವರೆ ತಿಂಗಳ ಹಿಂದೆ ಬಂದು ಸಾಲ ಕೊಟ್ಟ ಎಲ್ಲರನ್ನೂ ಕೇಳಿಕೊಂಡಿದ್ದೇನೆ. ಸೋತಿದ್ದೇನೆ, ಸತ್ತಿಲ್ಲ ಎಂದು ಹೇಳಿದೆ. ಎಲ್ಲರೂ ಪಾಸಿಟಿವ್ ಆಗಿ ಮಾತನಾಡಿ ಧೈರ್ಯ ಹೇಳಿದ್ದಾರೆ’ ಎಂದು ಅವರು ವಿವರಿಸಿದರು.

ಸಾಲ ಮಾಡಿಕೊಂಡಾಗ ದರ್ಶನ್ ಬಳಿ 1 ಕೋಟಿ ರೂಪಾಯಿ ಸಹಾಯ ಕೇಳಿದೆ. ಅವರು ಕೊಟ್ಟರು. ಮತ್ತೆ ಕೇಳೋಕೆ ಮನಸ್ಸು ಬರಲಿಲ್ಲ. ನಾನು ಎಲ್ಲಿದ್ದೇನೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ತುಗೂದೀಪ ಪ್ರೊಡಕ್ಷನ್ಸ್ ಚೆನ್ನಾಗಿ ನೋಡಿಕೊಂಡಿದೆ. ನಾನು ಅವರಿಗೆ ಮೋಸ ಮಾಡಿಲ್ಲ. ದರ್ಶನ್ ಬಳಿ ಕಷ್ಟ ಎಂದು ಹಣ ತೆಗೆದುಕೊಂಡಿದ್ದು ಅಷ್ಟೇ ಹೊರತು, ಮತ್ತೆ ಯಾವಾಗಲೂ ಹಣ ಮಾಡಿಲ್ಲ ಎಂದಿದ್ದಾರೆ ಅವರು.

ದರ್ಶನ್ ಅವರಿಗೆ ನಾನು ಸಾಲ ಮಾಡಿದ್ದೇನೆ ಅನ್ನೋದು ಗೊತ್ತಿತ್ತು. ಎಷ್ಟು ಸಾಲ ಮಾಡಿದ್ದೇನೆ ಅನ್ನೋದು ಗೊತ್ತಿರಲಿಲ್ಲ. ಅವರನ್ನು ಫೇಸ್ ಮಾಡೋಕೆ ಆಗಲ್ಲ ಅನ್ನೋದು ಗೊತ್ತಾಯ್ತು. ಅವರ ಮೇಲಿನ ಅಪಾರ ಗೌರವ ಊರನ್ನು ಬಿಡುವಂತೆ ಮಾಡಿತು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago