ಕೊಪ್ಪಳ : ‘ಬಳ್ಳಾರಿಯ ಕೊಳಗೇರಿಯಲ್ಲಿ ಹುಟ್ಟಿರುವ ಬಿ.ಶ್ರೀರಾಮುಲುರನ್ನು ಕರೆತಂದು ಶಾಸಕರನ್ನಾಗಿ, ಅವರನ್ನು ರಾಜ್ಯಮಟ್ಟದ ನಾಯಕನನ್ನಾಗಿ ಬೆಳೆಸಿದ್ದು ನಾನು’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ.
ಗಂಗಾವತಿಯಲ್ಲಿ ನಿನ್ನೆ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಯಕ ಸಮುದಾಯದ ಬಿ.ಶ್ರೀರಾಮುಲು, ಸಿರಗುಪ್ಪಾ ಕ್ಷೇತ್ರದ ಸೋಮಲಿಂಗಪ್ಪ ಅವರನ್ನು ಶಾಸಕರನ್ನಾಗಿ ಮಾಡಿದ್ದು ನಾನು. ಪರಿಶಿಷ್ಟ ಪಂಗಡ (ಎಸ್ಟಿ)ಕ್ಕೆ ಮೀಸಲಾತಿ ಇಲ್ಲದ ಸಂದರ್ಭದಲ್ಲೂ ನಾಯಕ ಸಮಾಜದವರನ್ನು ಶಾಸಕರನ್ನಾಗಿ ಮಾಡಿದ್ದೇನೆ’ ಎಂದು ಹೇಳಿದರು.
‘ಬಿ.ಶ್ರೀರಾಮುಲು ಹಾಗೂ ನನಗೆ ರಾಜಕೀಯ ಏನೇ ಆಗಿರಬಹುದು. ಆದರೆ, ನಾಯಕ ಸಮಾಜದ ಒಬ್ಬರನ್ನು ಬೆಳೆಸಿದ ಹೆಮ್ಮೆ ಇದೆ. ರಾಜ್ಯದಲ್ಲಿ ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ರಾಜ್ಯಾದ್ಯಂತ ಆಚರಿಸಲು ಹಾಗೂ ಸರ್ಕಾರಿ ರಜೆ ಘೋಷಿಸಬೇಕೆಂದು ಅಂದಿನ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದು ನಾನು ಹಾಗೂ ಶ್ರೀರಾಮುಲು’ ಎಂದು ನುಡಿದರು.
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನನ್ನ ಯೋಜನೆಗಳನ್ನು ಜಾರಿ ಮಾಡುತ್ತಿದ್ದು, ಪಂಚ ಗ್ಯಾರಂಟಿಗಳು ನನ್ನ ಯೋಜನೆಗಳು. ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿ ಮಾಡುತ್ತಿದ್ದಾರೆ ಎಂದು ಜನಾರ್ಧನ ರೆಡ್ಡಿ ಹೇಳಿದರು.
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…