Mysore
21
overcast clouds
Light
Dark

ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನ ಇವತ್ತಿನವರೆಗೂ ನೋಡಿಲ್ಲ: ಸಿಎಂ ಸಿದ್ದರಾಮಯ್ಯ

ಕೊಪ್ಪಳ (ಗಂಗಾವತಿ): ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ನುಡಿದರು.

ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಿಕೆಗಳಲ್ಲಿ ಬಿಜೆಪಿ ಇಂದು ಸುಳ್ಳು ಜಾಹಿರಾತು ನೀಡಿದೆ. ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ನಮ್ಮ ಹಾಗೆ ದಲಿತರಿಗೆ ಆರ್ಥಿಕ ಶಕ್ತಿ ನೀಡುವ SCP/TSP ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಪತ್ರಿಕಾ ಜಾಹಿರಾತು ಮೂಲಕ ಹಾದಿ ತಪ್ಪಿಸುತ್ತಿದೆ. ಈ ಸುಳ್ಳು ಜಾಹಿರಾತು ನಂಬಿ ಮೋಸ ಹೋಗಬೇಡಿ ಎಂದು ಜನರಿಗೆ ಮನವಿ ಮಾಡಿದರು.