Mysore
21
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ರಾಜ್ಯದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಆದ್ಯ ಕರ್ತವ್ಯವಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಹೈಕಮಾಂಡ್‌ ದೆಹಲಿಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಒಂದಾಗಿರುವುದರಿಂದ ಮತ್ತು ಕುಮಾರಸ್ವಾಮಿ ಅವರು ಈ ಹಿಂದೆ ಆಯ್ಕೆ ಆಗಿರುವುದರಿಂದ ದೆಹಲಿಯಲ್ಲಿ ಏರಡೂ ಪಕ್ಷಗಳ ನಾಯಕರು ಅಂತಿಮ ನಿರ್ಧಾರ ತೆಗದುಕೊಳ್ಳುತ್ತಾರೆ. ಇದಕ್ಕಾಗಿಯೇ ಸಮಿತಿಯೊಂದನ್ನು ರಚಿಸಲಾಗಿದೆ ಎಂದರು.

ಹೈಕಮಾಂಡ್‌ ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಹೀಗಾಗಿ ಯಾರೂ ಕೂಡ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಪಕ್ಷ ಯಾವಾಗಲು ಕಾರ್ಯಕರ್ತರ ಜೊತೆಗಿದೆ. ಮೂಲೆ ಮೂಲೆಗಳಲ್ಲಿ ಎಲೆ ಮರೆ ಕಾಯಿಯಂತೆ ಇರುವ ಎಲ್ಲರನ್ನೂ ನಮ್ಮ ಪಕ್ಷ ಗುರುತಿಸುತ್ತಾ ಬಂದಿದೆ. ಹೀಗಾಗಿ ಪಕ್ಷ ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದೆ ಎಂದರು.

 

Tags:
error: Content is protected !!