ಬೆಂಗಳೂರು: ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಆದ್ಯ ಕರ್ತವ್ಯವಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಹೈಕಮಾಂಡ್ ದೆಹಲಿಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಂದಾಗಿರುವುದರಿಂದ ಮತ್ತು ಕುಮಾರಸ್ವಾಮಿ ಅವರು ಈ ಹಿಂದೆ ಆಯ್ಕೆ ಆಗಿರುವುದರಿಂದ ದೆಹಲಿಯಲ್ಲಿ ಏರಡೂ ಪಕ್ಷಗಳ ನಾಯಕರು ಅಂತಿಮ ನಿರ್ಧಾರ ತೆಗದುಕೊಳ್ಳುತ್ತಾರೆ. ಇದಕ್ಕಾಗಿಯೇ ಸಮಿತಿಯೊಂದನ್ನು ರಚಿಸಲಾಗಿದೆ ಎಂದರು.
ಹೈಕಮಾಂಡ್ ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಹೀಗಾಗಿ ಯಾರೂ ಕೂಡ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಪಕ್ಷ ಯಾವಾಗಲು ಕಾರ್ಯಕರ್ತರ ಜೊತೆಗಿದೆ. ಮೂಲೆ ಮೂಲೆಗಳಲ್ಲಿ ಎಲೆ ಮರೆ ಕಾಯಿಯಂತೆ ಇರುವ ಎಲ್ಲರನ್ನೂ ನಮ್ಮ ಪಕ್ಷ ಗುರುತಿಸುತ್ತಾ ಬಂದಿದೆ. ಹೀಗಾಗಿ ಪಕ್ಷ ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದೆ ಎಂದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…