Categories: ರಾಜ್ಯ

ಮುಂದಿನ ಚುನಾವಣೆಯಲ್ಲಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ: ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ

ಬೆಳಗಾವಿ: 2028ರ ಚುನಾವಣೆಯಲ್ಲಿ ನಾನು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ ಅಭ್ಯರ್ತಿಗಳು ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಂತಸ ವ್ಯಕ್ತಪಡಿಸಿದರ ಅವರು, ಈ ಚುನಾವಣೆಯು ಇತರರನ್ನು ಆಯ್ಕೆ ಮಾಡುವ ನಾಯಕನಾಗಿ ನನ್ನನ್ನು ಬಲಪಡಿಸಿದೆ. ಬಿಜೆಪಿ ಹಿಡಿತದಲ್ಲಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ ನಾವೇ ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಈಗ ಇಲ್ಲ. ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಸಚಿವ ಸಂಪುಟದಲ್ಲಿ ಖಾತೆ ಬದಲಾವಣೆ ಬಗ್ಗೆಯೂ ಚರ್ಚೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಮಹಾರಾಷ್ಟ್ರದಲ್ಲಿ ಮಹಾವಿಕಾಸ ಆಘಾಡಿ ಸೋತಿರುವ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ನಮ್ಮ ಸೋಲಿಗೆ ಇವಿಎಂಗಳೇ ಕಾರಣ. ಇವಿಎಂಗಳ ಬಗ್ಗೆ ಬಹಳಷ್ಟು ಅನುಮಾನವಿದೆ. ಎಲ್ಲಿಯವರೆಗೆ ಇವಿಎಂಗಳು ಇರುತ್ತವೆಯೋ ಅಲ್ಲಿಯವರೆಗೆ ದೇಶದಲ್ಲಿ ಇದೇ ರೀತಿಯ ಪರಿಸ್ಥಿತಿ ಇರುತ್ತದೆ ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

55 mins ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

58 mins ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

1 hour ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

1 hour ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

1 hour ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

1 hour ago