ಬೆಳಗಾವಿ: 2028ರ ಚುನಾವಣೆಯಲ್ಲಿ ನಾನು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ತಿಗಳು ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಂತಸ ವ್ಯಕ್ತಪಡಿಸಿದರ ಅವರು, ಈ ಚುನಾವಣೆಯು ಇತರರನ್ನು ಆಯ್ಕೆ ಮಾಡುವ ನಾಯಕನಾಗಿ ನನ್ನನ್ನು ಬಲಪಡಿಸಿದೆ. ಬಿಜೆಪಿ ಹಿಡಿತದಲ್ಲಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ ನಾವೇ ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಈಗ ಇಲ್ಲ. ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಸಚಿವ ಸಂಪುಟದಲ್ಲಿ ಖಾತೆ ಬದಲಾವಣೆ ಬಗ್ಗೆಯೂ ಚರ್ಚೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಮಹಾರಾಷ್ಟ್ರದಲ್ಲಿ ಮಹಾವಿಕಾಸ ಆಘಾಡಿ ಸೋತಿರುವ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ನಮ್ಮ ಸೋಲಿಗೆ ಇವಿಎಂಗಳೇ ಕಾರಣ. ಇವಿಎಂಗಳ ಬಗ್ಗೆ ಬಹಳಷ್ಟು ಅನುಮಾನವಿದೆ. ಎಲ್ಲಿಯವರೆಗೆ ಇವಿಎಂಗಳು ಇರುತ್ತವೆಯೋ ಅಲ್ಲಿಯವರೆಗೆ ದೇಶದಲ್ಲಿ ಇದೇ ರೀತಿಯ ಪರಿಸ್ಥಿತಿ ಇರುತ್ತದೆ ಎಂದು ಕಿಡಿಕಾರಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…