ರಾಜ್ಯ

ಹಿಂದೂ ಆಗಿ ಹುಟ್ಟಿದ್ದೇನೆ ಹಿಂದೂ ಆಗೇ ಸಾಯುತ್ತೇನೆ : ಸಿ.ಟಿ ರವಿ

ಚಿಕ್ಕಬಳ್ಳಾಪುರ : ನಾನು ಹಿಂದೂ ಆಗಿಯೇ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ಬಿಜೆಪಿ ಮುಖಂಡ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಚಿಕ್ಕಬಳ್ಳಾಪುರದ ಮರಳುಕುಂಟೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಬಿಜೆಪಿಯವರಿಗೆ ಶ್ರೀರಾಮನೇ ಚುನಾವಣಾ ಅಜೆಂಡಾ ಎಂಬ ಪರಮೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ರಾಮಮಂದಿರ ನಿರ್ಮಾಣದ ಹೋರಾಟದಲ್ಲಿ ಬಿಜೆಪಿ ನೇರವಾಗಿ ತೊಡಗಿಸಿಕೊಂಡಿತ್ತು. ರಾಮಮಂದಿರಕ್ಕೆ ವಿರೋಧ ಮಾಡಿದ್ದು ಕಾಂಗ್ರೆಸ್ ಪಕ್ಷ. ಹಜ್ ಯಾತ್ರೆಗೆ ಕಳಿಸೋದು ಮಾತ್ರ ಜಾತ್ಯಾತೀತತೆಯೇ? ಅಯೋಧ್ಯೆಗೆ ಯಾತ್ರೆ ಕಳುಹಿಸಿದರೆ ಜಾತ್ಯಾತೀತತೆಗೆ ಭಂಗ ಬರುತ್ತದೆಯೇ? ಚುನಾವಣೆ ವೇಳೆಯ ಹಿಂದೂಗಳು ಇದೇ ರೀತಿ ಮಾತನಾಡುತ್ತಾರೆ ಎಂದು ಅವರು ಕಿಡಿಕಾರಿದ್ದಾರೆ.

ನಾವು ಹುಟ್ಟಿನಿಂದ ಸಾಯುವವರೆಗೂ ಹಿಂದೂಗಳು, ಆದರೆ ಕೆಲವರಿಗೆ ಚುನಾವಣೆ ವೇಳೆ ಉದ್ದದ ನಾಮ ಬರುತ್ತದೆ. ಜೈ ಶ್ರೀರಾಮ್, ಹರಹರ ಮಹಾದೇವ ಘೋಷಣೆಗಳು ಬರುತ್ತವೆ. ಆಮೇಲೆ ಇವರೆಲ್ಲ ನಾಪತ್ತೆ ಆಗುತ್ತಾರೆ. ಜಾತ್ಯಾತೀತತೆ ಅಂದರೆ ಸರ್ವ ಧರ್ಮ ಭಾವ, ತಾಲಿಬಾನ್ ಹಾಗೂ ಹಮಾಸ್‍ಗಳ ಬಳಿ ಸರ್ವ ಧರ್ಮ ಭಾವ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಯೋಧ್ಯೆಗೆ ಉಚಿತ ಪ್ರವಾಸ ಆಯೋಜನೆ ಎಂಬ ಬಿಜೆಪಿ ಚುನಾವಣಾ ಪ್ರಣಾಳಿಕೆ ವಿಚಾರಕ್ಕೆ ಪರಮೇಶ್ವರ್ ಅವರು ಟೀಕೆ ಮಾಡಿದ್ದರು.

lokesh

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

12 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

13 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

14 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

14 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

14 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

18 hours ago