ಚಿಕ್ಕಬಳ್ಳಾಪುರ: ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟ ತೀರ್ಮಾನ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತದೆಯೋ ಅದೇ ಅಂತಿಮ. ಹೈಕಮಾಂಡ್ ತೀರ್ಮಾನಕ್ಕೆ ನಾನಾಗಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ಆಗಲಿ ಬದ್ಧರಾಗಿರುತ್ತೇವೆ ಎಂದು ಹೇಳಿದರು.
ಹೈಕಮಾಂಡ್‌ನವರು ನನ್ನನ್ನು ಮುಂದುವರಿಸಲು ಹೇಳಿದರೆ ನಾನೇ ಮುಂದುವರಿಯುತ್ತೇನೆ. ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದರು.





