ಬೆಂಗಳೂರು : ಮಂಡ್ಯ ಜನತೆ ಹಾಗೂ ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರವನ್ನು ಮಂಡ್ಯದಲ್ಲೇ ತಿಳಿಸುವುದಾಗಿ ಸುಮಲತಾ ಅಂಬರೀಶ್ ಹೇಳಿದ್ದಾರೆ.
ನಗರದ ತಮ್ಬಮ ನಿವಾಸಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯಾಧ್ಯಕ್ಷರ ಜೊತೆ ಸುಮಾರು ಒಂದು ಗಂಟೆಗಳ ಕಾಲ ಸುದೀರ್ಘ ಚರ್ಚೆಯ ನಡೆದಿದೆ. ಬಿಜೆಪಿಗೆ ನನ್ನ ಬೆಂಬಲವನ್ನು ಕೇಳಿದ್ದಾರೆ.
ನಾಳೆ ಮಂಡ್ಯ ಜನತೆ ಹಾಗೂ ನನ್ನ ಬೆಂಬಲಿಗರ ಜೊತೆ ಮಾತುಕತೆ ನಡೆಸುತ್ತಿದ್ದೇನೆ. ಅವರ ಸಲಹೆಗಳನ್ನು ಪಡೆದು ಬಳಿಕ ನನ್ನ ನಿರ್ಧಾರವನ್ನು ಮಂಡ್ಯದಲ್ಲೇ ತಿಳಿಸುತ್ತೇನೆ ಎಂದು ವಿಜಯೇಂದ್ರ ಅವರಿಗೆ ತಿಳಿಸಿದ್ದೇನೆ ಎಂದರು.