ರಾಜ್ಯ

ಪೋಕ್ಸೋ ಪ್ರಕರಣ| ಜೂನ್‌. 17ಕ್ಕೆ ವಿಚಾರಣೆಗೆ ಹಾಜರಾಗುತ್ತೇನೆ; ಬಿಎಸ್‌ವೈ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ವಿಚಾರಣೆ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಜೂನ್‌. 17 ರಂದು ಹಾಜರಾಗುವುದಾಗಿ ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿಂದು (ಜೂನ್‌.15) ಮಾತನಾಡಿರುವ ಬಿಎಸ್‌ವೈ, ಪೋಕ್ಸೋ ಪ್ರಕರಣದಡಿ ನಾನು ಯಾರನ್ನು ದೂರುವುದಿಲ್ಲ. ನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಹೋಗಿದ್ದೆ. ವಿಚಾರಣೆಗೆ ಜೂನ್‌. 17 ರಂದು ಹಾಜರಾಗುವುದಾಗಿ ಹೇಳಿದ್ದೆ. ಅದರಂತೆ ಸೋಮವಾರ ತಪ್ಪದೇ ಹಾಜರಾಗುತ್ತೇನೆ ಎಂದರು.

ಹಲವಾರು ಜನರು ಪೋಕ್ಸೋ ಪ್ರಕರಣದಲ್ಲಿ ಅನವಶ್ಯಕ ಗೊಂದಲ ಸೃಷ್ಠಿಸುವ ಪ್ರಯತ್ನ ಮಾಡಿದರು. ಈ ಬಗ್ಗೆ ಕಾಲವೇ ತೀರ್ಮಾನ ಮಾಡಲಿದೆ. ಸತ್ಯ ಏನು ಎಂಬುದನ್ನು ಜನರೇ ತಿಳಿದಿದ್ದಾರೆ. ಕುತಂತ್ರ ಮಾಡುವವರಿಗೆ ಜನರು ಈಗಾಗಲೇ ಬುದ್ದಿ ಕಲಿಸಿದ್ದಾರೆ ಎಂದು ಮಾಜಿ ಸಿಎಂ ಬಿಎಸ್‌ವೈ ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

3 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

4 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

9 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

10 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

10 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

10 hours ago