ಚಿಕ್ಕಬಳ್ಳಾಪುರ: 5 ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರಕ್ಕೆ ತೆರೆ ಎಳೆದಿದ್ದಾರೆ.
ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 5 ವರ್ಷ ನಾನೇ ಸಿಎಂ. ನಿಮಗ್ಯಾಕೆ ಅನುಮಾನ ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯವರು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅವರೇನು ನಮ್ಮ ಹೈಕಮಾಂಡಾ? ಎಂದು ಕಿಡಿಕಾರಿದರು.
ಐದು ವರ್ಷ ನಾನೇ ಮುಖ್ಯಮಂತ್ರಿ. ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ. ಅನಗತ್ಯ ಹೇಳಿಕೆ ನೀಡುತ್ತಾ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಜನರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.





