ರಾಜ್ಯ

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯದಲ್ಲಿ ನಯವಾಗಿ ಜಾರಿಕೊಂಡರು.

ವಿಧಾನಸಭೆಯಲ್ಲಿ 2026- 27ನೇ ಸಾಲಿನ ಆಯವ್ಯಯ ಅವರು ಅಂದಾಜುಗಳ ಮೇಲೆ ನಡೆದ ಸಾಮಾನ್ಯ ಚರ್ಚೆಗೆ ಉತ್ತರ ನೀಡುತ್ತಿದ್ದ ಮುಖ್ಯಮಂತ್ರಿ ಅವರನ್ನು ಬಿಜೆಪಿಯ ಹಿರಿಯ ಶಾಸಕ ಸುನಿಲ್‌ಕುಮಾರ್ ಮಧ್ಯಪ್ರವೇಶಿಸಿ ಡಿ.ಕೆ.ಶಿವ ಕುಮಾರ್ ಅವರು ಮುಖ್ಯ ಮಂತ್ರಿಯಾದರೂ ಖುಷಿಯಾಗುತ್ತದೆ ಎಂದು ಹೇಳಲಿಲ್ಲ ಎಂದು ಛೇಡಿಸಿದರು.

ಆಗ ಮುಖ್ಯಮಂತ್ರಿಗಳು, ನಮ್ಮ ಪಕ್ಷದ ಹೈಕಮಾಂಡ್ ಹೇಳುವವರೆಗೂ ನಾನೇ ಮುಖ್ಯ ಮಂತ್ರಿ ಎಂಬುದನ್ನು ಪುನರುಚ್ಚರಿಸಿದರು. ನಮ್ಮಲ್ಲಿ ಮುಖ್ಯಮಂತ್ರಿಯಾದರೂ ಖುಷಿ ಯಾಗುತ್ತದೆ. 224 ಶಾಸಕರೂ ಮುಖ್ಯಮಂತ್ರಿಯಾಗಲು ಅರ್ಹರು. ಯಾರೇ ಸಿಎಂ ಆದರೂ ಖುಷಿಪಡುತ್ತೇನೆ. ಕೆ.ಎಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಶಾಸಕ ಕೋನ ರೆಡ್ಡಿ ಸೇರಿದಂತೆ ಕೆಲವರ ಹೆಸರನ್ನು ಮಾತ್ರ ಉಲ್ಲೇಖಿಸಿ ಅವರು ಮುಖ್ಯ ಮಂತ್ರಿಯಾಗಬಾರದೇ
ಮುಖ್ಯಮಂತ್ರಿ ಎಂದು ಪ್ರಶ್ನಿಸಿದರು. ಅವರೆಲ್ಲರಿಗೂ ಯೋಗ್ಯತೆ ಇದೆ, ಅವಕಾಶ ಸಿಗಲ್ಲ ಅಷ್ಟೇ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

27 mins ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

4 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

4 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

4 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

4 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

5 hours ago