ಶಿವಮೊಗ್ಗ : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೋದಿ ಪರವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬಿಜೆಪಿ ಪಕ್ಷದಿಂದ ತಮ್ಮ ಮಗ ಕಾಂತೇಶ್‌ಗೆ ಟಿಕೆಟ್ ಕೈತಪ್ಪಿದ ಹಿನ್ನಲೆ ಬೆಂಬಲಿಗರ ಸಭೆ ನಡೆಸಿ ಮಾತನಾಡಿದ ಅವರು, ಎಲ್ಲ ಬೆಂಬಲಿಗರ ವತ್ತಾಯದ ಮೇರೆಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನನ್ನ ಮಗನಿಗೆ ಲೋಕಸಭಾ ಚುನಾವಣೆಯ ಟಿಕೆಟ್ ಕೊಡಿಸಿ, ತಾವೆ ಬಂದು ಪ್ರಚಾರ ಮಾಡಿ ಗೆಲ್ಲಿಸಿಕೊಂಡು ಬರುತ್ತೇನೆ ಎಂದಿದ್ದರು. ಆದರೆ ತಮ್ಮ ಮಾತಿಗೆ ತಪ್ಪುವ ಮೂಲಕ ನಮಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.
ಯಡಿಯೂರಪ್ಪ ಅವರು ತಮಗೆ ಬೇಕಾದವರಿಗೆ ಟಿಕೆಟ್ ಕೊಡಿಸುವ ಮೂಲಕ ನಮಗೆ ಮೋಸ ಮಾಡಿದ್ದಾರೆ. ಇದರಿಂದಾಗಿ ನಮ್ಮ ಬೆಂಬಲಿಗರು ಮನ ನೊಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಸೂಚಿಸಿದ್ದಾರೆ. ಹೀಗಾಗಿ ಅವರ ಒತ್ತಾಯದ ಮೇರೆಗೆ ಶಿವಮೊಗ್ಗದಿಂದ ನಾನೇ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ರಕ್ತದ ಕಣ ಕಣದಲ್ಲಿ ಬಿಜೆಪಿ : ಯಾವುದೇ ಕಾರಣಕ್ಕು ನಾನು ಪಕ್ಷಕ್ಕೆ ದ್ರೋಹ ಮಾಡುತ್ತಿಲ್ಲ, ಮಾಡುವುದೂ ಇಲ್ಲ. ನನ್ನ ರಕ್ತದ ಕಣ-ಕಣದಲ್ಲೂ ಬಿಜೆಪಿ ಇದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಶ್ರೀರಾಮನನ್ನ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…