ಬೆಂಗಳೂರು: ನಾನು ಮುಖ್ಯಮಂತ್ರಿ ಆದ ಬಳಿಕ ಶೋಷಿತ, ದಲಿತ ಸಮುದಾಯಗಳ ಬೇಡಿಕೆಗಳನ್ನು ನಿರಂತರವಾಗಿ ಈಡೇರಿಸುತ್ತಲೇ ಬಂದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.
ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನ ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಾವು. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ ಎಂದರು.
ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.
ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು. ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ಹೇಳಿದರು.
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…