ತುಮಕೂರು: ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಬೇಸರದಿಂದ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡಿದ ಅವರು, ನಾನು ಯಾವ ಪಕ್ಷದ ಬಾವುಟ ಹಿಡಿಯಬೇಕು ಎನ್ನುವುದನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ. ನಮ್ಮ ಕಾರ್ಯಕರ್ತರಿಗೂ ಕಾಂಗ್ರೆಸ್ ಪಕ್ಷದ ಮೇಲೆ ಬೇಸರ ಬಂದಂತಾಗಿದೆ. ಹಾಗಾಗಿ ನಾನು ಮುಂದಿನ ದಿನಗಳಲ್ಲಿ ಯಾವ ಬಾವುಟ ಹಿಡಿಯಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.
ಇದನ್ನು ಓದಿ: ಕೆ.ಎನ್ ರಾಜಣ್ಣ ವಜಾಕ್ಕೆ ಶ್ರೀರಾಮುಲು ಕಿಡಿ
ಇನ್ನು ಮುಂದುವರಿದು ಮಾತನಾಡಿದ ಅವರು, 2004ರಲ್ಲಿ ಕಾಂಗ್ರೆಸ್ ಪಕ್ಷ ನನ್ನನ್ನು ಗೌರವದಿಂದ ನೋಡಿಕೊಂಡಿರಲಿಲ್ಲ. ಆಗ ನಾನು ಜೆಡಿಎಸ್‌ನಿಂದ ಸ್ಪರ್ಧಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ವೈಟ್ ವಾಶ ಮಾಡಿದ್ದೆವು. ಕಾಂಗ್ರೆಸ್ ಅನ್ನು ಕಂಪ್ಲೀಟ್ ಮುಗಿಸಿದ್ವಿ. ಜಿಲ್ಲೆಯಲ್ಲಿ ಮತ್ತೆ ಆ ಸಂದರ್ಭ ಬರುತ್ತೋ ಏನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.





