ರಾಜ್ಯ

ಯಾವ ಬಾವುಟ ಹಿಡಿಬೇಕು ಎನ್ನುವುದನ್ನು ಮುಂದೆ ತೀರ್ಮಾನ ಮಾಡುತ್ತೇನೆ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಬೇಸರದಿಂದ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡಿದ ಅವರು, ನಾನು ಯಾವ ಪಕ್ಷದ ಬಾವುಟ ಹಿಡಿಯಬೇಕು ಎನ್ನುವುದನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ. ನಮ್ಮ ಕಾರ್ಯಕರ್ತರಿಗೂ ಕಾಂಗ್ರೆಸ್‌ ಪಕ್ಷದ ಮೇಲೆ ಬೇಸರ ಬಂದಂತಾಗಿದೆ. ಹಾಗಾಗಿ ನಾನು ಮುಂದಿನ ದಿನಗಳಲ್ಲಿ ಯಾವ ಬಾವುಟ ಹಿಡಿಯಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.

ಇದನ್ನು ಓದಿ: ಕೆ.ಎನ್‌ ರಾಜಣ್ಣ ವಜಾಕ್ಕೆ ಶ್ರೀರಾಮುಲು ಕಿಡಿ

ಇನ್ನು ಮುಂದುವರಿದು ಮಾತನಾಡಿದ ಅವರು, 2004ರಲ್ಲಿ ಕಾಂಗ್ರೆಸ್‌ ಪಕ್ಷ ನನ್ನನ್ನು ಗೌರವದಿಂದ ನೋಡಿಕೊಂಡಿರಲಿಲ್ಲ. ಆಗ ನಾನು ಜೆಡಿಎಸ್‌ನಿಂದ ಸ್ಪರ್ಧಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ವೈಟ್‌ ವಾಶ ಮಾಡಿದ್ದೆವು. ಕಾಂಗ್ರೆಸ್‌ ಅನ್ನು ಕಂಪ್ಲೀಟ್‌ ಮುಗಿಸಿದ್ವಿ. ಜಿಲ್ಲೆಯಲ್ಲಿ ಮತ್ತೆ ಆ ಸಂದರ್ಭ ಬರುತ್ತೋ ಏನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

44 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

59 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

1 hour ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

1 hour ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

2 hours ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

2 hours ago