Mysore
27
overcast clouds

Social Media

ಮಂಗಳವಾರ, 09 ಜೂನ್ 2026
Light
Dark

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

cm siddaramaiah

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ ನಂಬಿಕೆಯಿದೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಹೈಕಮಾಂಡ್‌ ಏನು ಹೇಳುತ್ತೋ ಅದನ್ನೇ ನಾನು ಕೇಳುವುದು. ಎಲ್ಲವನ್ನೂ ಡಿ.ಕೆ.ಸುರೇಶ್‌ ಅವರನ್ನೇ ಕೇಳಿ ಎಂದು ಟಾಂಗ್‌ ಕೊಟ್ಟರು.

ಹೈಕಮಾಂಡ್‌ ಹೇಳಿದಂತೆ ನಾನು ನಡೆದುಕೊಳ್ಳಲೇಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಡ ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳಬೇಕು ಎಂದು ಸ್ಪಷ್ಟನೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಹಬ್ಬ ಮುಗಿದ ಬಳಿಕ ಬಜೆಟ್‌ ಮಂಡನೆಯ ದಿನಾಂಕವನ್ನು ಘೋಷಣೆ ಮಾಡುತ್ತೇನೆ ಎಂದು ಹೇಳಿದರು.

 

Tags:
error: Content is protected !!