ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ ಮರು ವಸೂಲಿಯಾಗಿದ್ದು, ಈ ಪ್ರಕರಣದ ಆರೋಪಗಳಿಂದ ನಾನು ಮುಕ್ತನಾಗಿ ಹೊರಬರುತ್ತೇನೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ವತಿಯಿಂದ ವಿಧಾನಸೌಧದ ಬಳಿ ಮಹಾತ ಗಾಂಧೀಜಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಸಚಿವರಾಗಿದ್ದ ಸಂದರ್ಭದಲ್ಲಿ ನಿಗಮದ ಮೇಲಿನ ಆರೋಪಗಳ ಕುರಿತು ತನಿಖೆಗೆ ಎಸ್‌ಐಟಿ ರಚಿಸಲಾಗಿತ್ತು. ತನಿಖೆಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಬಳಿಕ ತನಿಖೆ ನಡೆದಿದ್ದು, ಪ್ರಕರಣದಲ್ಲಿ ತಮ ಪಾತ್ರವಿಲ್ಲ ಎಂಬುದು ಸಾಬೀತಾಗಿದೆ ಎಂದು ಹೇಳಿದರು.
ದುರುಪಯೋಗವಾಗಿದೆ ಎಂದು ಆರೋಪಿಸಲಾಗಿದ್ದ 187 ಕೋಟಿ ರೂಪಾಯಿಗಳನ್ನು ಮರು ವಸೂಲಿ ಮಾಡಿ ಸರ್ಕಾರದ ಖಜಾನೆಗೆ ಜಮೆ ಮಾಡಲಾಗಿದೆ. ಹೀಗಾಗಿ ತಾವು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವುದಾಗಿ ನಾಗೇಂದ್ರ ತಿಳಿಸಿದರು. ಹಗರಣದ ಕುರಿತು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಗೆ ತಲೆಬಾಗಿ ಸಂಪೂರ್ಣ ಸಹಕಾರ ನೀಡಿದ್ದೇನೆ. ಸದ್ಯ ಜಾಮೀನು ಪಡೆದು ಹೊರಗಿದ್ದೇನೆ ಎಂದು ಅವರು ಹೇಳಿದರು. ಬಿಜೆಪಿಯವರಿಗೆ ದಲಿತರನ್ನು ಕಂಡರೆ ಆಗುವುದಿಲ್ಲ. ಅದರಲ್ಲೂ ದಲಿತರು ಮಂತ್ರಿಯಾದರೆ ಬಿಜೆಪಿಯವರು ಅದನ್ನು ಸಹಿಸುವುದಿಲ್ಲ ಎಂದು ನಾಗೇಂದ್ರ ಆರೋಪಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಹಲವು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ದೇಶದಲ್ಲಿ ಸುಮಾರು ಎರಡೂವರೆ ಸಾವಿರಕ್ಕೂ ಹೆಚ್ಚು ಶಾಸಕರ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ. ತಮ್ಮ ವಿರುದ್ಧ ಕೇಳಿಬಂದಿರುವುದು ಕೂಡ ಕೇವಲ ಆರೋಪಗಳಷ್ಟೇ. ಯಾವುದೇ ಪ್ರಕರಣದಲ್ಲಿ ತಾವು ದೋಷಿ ಎಂದು ತೀರ್ಪು ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ನೆಲದ ಕಾನೂನಿನ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಕಾನೂನು ಹೋರಾಟವನ್ನು ಮುಂದುವರಿಸುತ್ತೇನೆ. ಅಂತಿಮವಾಗಿ ಆರೋಪಗಳಿಂದ ಮುಕ್ತನಾಗಿ ಹೊರಬರುವ ವಿಶ್ವಾಸವಿದೆ ಎಂದು ಸಚಿವ ಬಿ. ನಾಗೇಂದ್ರ ಹೇಳಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…