Mysore
24
overcast clouds

Social Media

ಮಂಗಳವಾರ, 26 ಮೇ 2026
Light
Dark

ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

cm siddaramaiah

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಪತ್ರ ಬರೆದಿದ್ದಾರೆ. ಅಸ್ಸಾಂ ಚುನಾವಣೆ ಸಂಬಂಧ ಸಭೆ ಇರುವುದರಿಂದ ದೆಹಲಿಗೆ ತೆರಳುತ್ತಿದ್ದಾರೆ. ಬಜೆಟ್‌ ಪೂರ್ವಭಾವಿ ಸಭೆ ಅವರ ಅನುಪಸ್ಥಿತಿಯಲ್ಲಿ ನಡೆಯಲಿದೆ ಎಂದು ಹೇಳಿದರು.

ಇನ್ನು ದೆಹಲಿಗೆ ನೀವು ಭೇಟಿ ನೀಡುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್‌ ಕರೆಯದೇ ನಾನೇಗೆ ದೆಹಲಿಗೆ ಹೋಗಲಿ. ನನಗೆ ಬಜೆಟ್‌ ಸಿದ್ಧತೆ ಕೆಲಸಗಳು ಇವೆ ಎಂದು ಹೇಳಿದರು.

 

Tags:
error: Content is protected !!