ರಾಜ್ಯ

ನಾನು ಯಾವುದೇ ಗುಂಪುಗಾರಿಕೆ ಮಾಡಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನನ್ನ ಬಳಿ ಯಾವುದೇ ಬಣ ಇಲ್ಲ. ನಾನು ಗುಂಪುಗಾರಿಕೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಶಾಸಕರ ದೆಹಲಿ ಯಾತ್ರೆ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಬಳಿ ಯಾವುದೇ ಬಣ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಗುಂಪುಗಾರಿಕೆ ಎನ್ನುವುದು ನನ್ನ ರಕ್ತದಲ್ಲೇ ಇಲ್ಲ ಎಂದು ಹೇಳಿದರು.

ಇದನ್ನು ಓದಿ: ಸಿಎಂ ಬದಲಾವಣೆ ವಿಚಾರ: ವರಿಷ್ಠರ ತೀರ್ಮಾನವೇ ಅಂತಿಮ ಎಂದ ತನ್ವೀರ್‌ ಸೇಠ್‌

ಇನ್ನು ಶಾಸಕರು, ಸಚಿವರು ದೆಹಲಿಗೆ ಹೋಗುವುದರಲ್ಲಿ ತಪ್ಪೇನಿದೆ. ಅದು ಅವರ ಹಕ್ಕು, ಹೈಕಮಾಂಡ್‌ ಜೊತೆ ಮಾತನಾಡಲು ಅವರು ದೆಹಲಿಗೆ ಹೋಗಿದ್ದಾರೆ. ಡಿನ್ನರ್‌ ಮೀಟಿಂಗ್‌ಗಳು ರಾಜಕೀಯದಲ್ಲಿ ನಡೆಯುತ್ತಿರುತ್ತದೆ. ಇದರಲ್ಲಿ ತಪ್ಪೇನಿದೆ ಎಂದು ಹೇಳಿದರು.

ನಾನೇ ಸಿಎಂ ಆಗಿರುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ವಿಚಾರಧಾರೆಗಳನ್ನು ಹೇಳಿದ್ದಾರೆ. ಅವರಿಗೆ ನಾನು ಶುಭ ಹಾರೈಸುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

7 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

7 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

7 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

7 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

10 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

10 hours ago