ತುಮಕೂರು: ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ನನ್ಯಾಕೆ ಬಿಜೆಪಿಗೆ ಹೋಗಲಿ. ನಾನು 35 ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ. ಈಗ ಚುನಾವಣೆ ನಡೆದರೂ ಅತ್ಯಧಿಕ ಮತಗಳಿಂದ ಗೆಲ್ಲುತ್ತೇನೆ ಎಂದರು.
ನಾನು ಭ್ರಷ್ಟಾಚಾರ ಮಾಡಿಲ್ಲ. ಆದರೂ ರಾಜೀನಾಮೆ ಕೊಟ್ಟಿದ್ದೇನೆ. ನಾನು ಯಾಕೆ ಬಿಜೆಪಿಗೆ ಹೋಗಬೇಕು? ಎಂದು ಪ್ರಶ್ನೆ ಮಾಡಿದರು.
ಇದನ್ನು ನೋಡಿ: ಪರಮೇಶ್ವರ್ ಬಳಿ ಕೆ.ಎನ್.ರಾಜಣ್ಣ ಪಶ್ಚಾತ್ತಾಪದ ಮಾತು
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಬಿಜೆಪಿ, ಜೆಡಿಎಸ್, ಕಾಂಗ್ರೆಸ್, ಪಕ್ಷೇತರ ಸೇರಿದಂತೆ ಯಾವ ಪಕ್ಷದಿಂದ ನಿಂತರೂ ಮತ ಹಾಕಿ ನನ್ನನ್ನು ಜನ ಗೆಲ್ಲಿಸುತ್ತಾರೆ. ಸಿದ್ದರಾಮಯ್ಯ ನೇತೃತ್ವ ಇರುವವರೆಗೂ ನನ್ನ ಭವಿಷ್ಯಕ್ಕೆ ತೊಂದರೆಯಿಲ್ಲ ಎಂದು ಹೇಳಿದ್ದಾರೆ.
ಇನ್ನು ಪಕ್ಷ ವಿರೋಧಿ ಹೇಳಿಕೆ ನೀಡಿದ ಆರೋಪದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿತ್ತು. ಈ ಬೆನ್ನಲ್ಲೇ ಕೆ.ಎನ್.ರಾಜಣ್ಣ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಅನುಮಾನಗಳಿಗೂ ಇಂದು ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.





