ರಾಜ್ಯ

ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ ಬಿಡಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ

ತುಮಕೂರು: ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ ಬಿಡುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ ಬಿಡುವುದಿಲ್ಲ. ನನ್ಯಾಕೆ ಬಿಜೆಪಿಗೆ ಹೋಗಲಿ. ನಾನು 35 ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ. ಈಗ ಚುನಾವಣೆ ನಡೆದರೂ ಅತ್ಯಧಿಕ ಮತಗಳಿಂದ ಗೆಲ್ಲುತ್ತೇನೆ ಎಂದರು.

ನಾನು ಭ್ರಷ್ಟಾಚಾರ ಮಾಡಿಲ್ಲ. ಆದರೂ ರಾಜೀನಾಮೆ ಕೊಟ್ಟಿದ್ದೇನೆ. ನಾನು ಯಾಕೆ ಬಿಜೆಪಿಗೆ ಹೋಗಬೇಕು? ಎಂದು ಪ್ರಶ್ನೆ ಮಾಡಿದರು.

ಇದನ್ನು ನೋಡಿ: ಪರಮೇಶ್ವರ್‌ ಬಳಿ ಕೆ.ಎನ್.ರಾಜಣ್ಣ ಪಶ್ಚಾತ್ತಾಪದ ಮಾತು

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌, ಪಕ್ಷೇತರ ಸೇರಿದಂತೆ ಯಾವ ಪಕ್ಷದಿಂದ ನಿಂತರೂ ಮತ ಹಾಕಿ ನನ್ನನ್ನು ಜನ ಗೆಲ್ಲಿಸುತ್ತಾರೆ. ಸಿದ್ದರಾಮಯ್ಯ ನೇತೃತ್ವ ಇರುವವರೆಗೂ ನನ್ನ ಭವಿಷ್ಯಕ್ಕೆ ತೊಂದರೆಯಿಲ್ಲ ಎಂದು ಹೇಳಿದ್ದಾರೆ.

ಇನ್ನು ಪಕ್ಷ ವಿರೋಧಿ ಹೇಳಿಕೆ ನೀಡಿದ ಆರೋಪದ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್‌ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿತ್ತು. ಈ ಬೆನ್ನಲ್ಲೇ ಕೆ.ಎನ್.ರಾಜಣ್ಣ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಅನುಮಾನಗಳಿಗೂ ಇಂದು ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

1 hour ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

3 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

3 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

4 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

4 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

5 hours ago