ರಾಜ್ಯ

ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನನ್ನ ರಾಜೀನಾಮೆ ಬಗ್ಗೆ ಕೇಳುವ ಯಾವುದೇ ನೈತಿಕತೆ ಇಲ್ಲ ತಿರುಗೇಟು ನೀಡಿದರು.

ಇನ್ನು ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಪ್ರಯತ್ನಿಸಿ, ನಮ್ಮ ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ನನ್ನ ರಾಜೀನಾಮೆ ಕೇಳುವ ಯಾವುದೇ ನೈತಿಕತೆ ಕುಮಾರಸ್ವಾಮಿಗೆ ಇಲ್ಲ ಎಂದು ಕಿಡಿಕಾರಿದರು.

ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಅವರೇ ಬೇಲ್‌ ಮೇಲೆ ಹೊರಗಿದ್ದಾರೆ. ಹೀಗಿರುವಾಗ ನಾನೇಕೆ ರಾಜೀನಾಮೆ ಕೊಡಬೇಕು? ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

16 mins ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

27 mins ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

2 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

2 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

2 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

4 hours ago