DCM D.K. Shivakumar says there will be a big revolution in the state by 2028
ಬೆಂಗಳೂರು: ಅಧ್ಯಕ್ಷ ಸ್ಥಾನದಿಂದ ನಾನು ಓಡಿ ಹೋಗುವುದಿಲ್ಲ. ಆದರೆ ಇಲ್ಲಿ ನಾವು ಶಾಶ್ವತವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪಕ್ಷದ ಕಚೇರಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವುದಿಲ್ಲ. ನಮ್ಮ ಕಾಲದಲ್ಲಿ ಏನಾದರೂ ಗುರುತು ಬಿಟ್ಟು ಹೋಗಬೇಕು ಎಂದರು.
ಎಲ್ಲಿ ತನಕ ಕೆಪಿಸಿಸಿ ಅಧ್ಯಕ್ಷರಾಗಿ ಇರಿ ಅಂತಾರೆ, ಅಲ್ಲಿಯವರೆಗೂ ನಾನು ಕೆಲಸ ಮಾಡುತ್ತೇನೆ. ಅಧ್ಯಕ್ಷರಾದವರು ಹೇಗೆ ಕೆಲಸ ಮಾಡಬೇಕು, ಆ ಮಾದರಿಯನ್ನು ನಾನು ರೂಪಿಸುತ್ತಿದ್ದೇನೆ . ಪಕ್ಷಕ್ಕೆ ಕಟ್ಟಡ ಕಟ್ಟಬೇಕಾಗುತ್ತದೆ. ಸದಸ್ಯತ್ವ ನೋಂದಣಿ ಮಾಡಿಸಬೇಕಾಗುತ್ತದೆ. ಆ ಕೆಲಸಗಳ ಬಗ್ಗೆ ನಾನು ಹೇಳಿದ್ದೇನೆ. ಅದರ ಹೊರತು ಬೇರೆ ಏನು ಇಲ್ಲ, ನಾನು ಓಡಿ ಹೋಗುವ ಮನುಷ್ಯ ಅಲ್ಲ ಎಂದರು.
ಎಲ್ಲಿಯವರೆಗೂ ಅವಕಾಶ ಕೊಡುತ್ತಾರೆ, ಅಲ್ಲಿಯವರೆಗೆ ಕೆಲಸ ಮಾಡುತ್ತೇನೆ. ಗಾಂಧಿ ಕುಟುಂಬ ಹೇಳಿದಂತೆ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಕಚೇರಿಗಳ ನಿರ್ಮಾಣ ಶಂಕುಸ್ಥಾಪನೆ ಸಂಬಂಧಪಟ್ಟಂತೆ ಕಾರ್ಯಕ್ರಮಕ್ಕಾಗಿ ದಿನಾಂಕ ನೀಡುವಂತೆ ಕೇಳಿದ್ದೇನೆ. ಹೈಕಮಾಂಡ್ ನಾಯಕರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…