ರಾಜ್ಯ

ಕಾಂಗ್ರೆಸ್‌ ಶಾಸಕರ ಅಸಮಾಧಾನ ಬಗೆಹರಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌‍ ಶಾಸಕರ ಅಸಮಾಧಾನವನ್ನು ನಾನು ಬಗೆಹರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಆರ್‌.ಪಾಟೀಲ್‌ ಅವರನ್ನು ರಾಯಚೂರಿಗೆ ಆಗಮಿಸಲು ನಾನು ಕರೆದಿದ್ದೆ. ಆದರೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿಲ್ಲ. ಹಾಗಾಗಿ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ 25ಕ್ಕೆ ಬಂದು ತಮ್ಮನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅವರೊಂದಿಗೆ ನಾನು ಚರ್ಚೆ ಮಾಡುತ್ತೇನೆ ಎಂದರು.

ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರೊಂದಿಗೂ ಚರ್ಚೆ ಮಾಡುತ್ತೇನೆ ಎಂದರು.

ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವುದೂ ಇಲ್ಲ. ಬಜೆಟ್‌ನಲ್ಲಿ ಆ ರೀತಿ ಪ್ರಸ್ತಾಪಗಳಿರುವುದಿಲ್ಲ. ರಾಜು ಕಾಗೆ ಅವರಿಗೆ ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವ ರೂಪದಲ್ಲಿ ಕೊಡಲಾಗಿದೆಯೋ ಗೊತ್ತಿಲ್ಲ. ಅಗತ್ಯ ಇರುವ ಕಡೆಗೆ ವಿಶೇಷವಾಗಿ ಅನುದಾನ ನೀಡಬೇಕಾಗುತ್ತದೆ. ಆದರೆ ಮುಖ್ಯಮಂತ್ರಿಯವರ ಅನುದಾನ ಎಂದು ಯಾವುದೂ ಇಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

20 mins ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

39 mins ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

1 hour ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

1 hour ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

2 hours ago