ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬೇಡಿಕೆ ಇಟ್ಟಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸ್ವತಃ ಅಶೋಕ್ ಅವರೇ ನನ್ನನ್ನು ಚೇಂಬರ್‌ಗೆ ಕರೆದು ಮಾತನಾಡಿದರು. ಯತ್ನಾಳ್ ಅವರೇ ನೀವು ಬಿಜೆಪಿಗೆ ವಾಪಸ್ ಆಗಲೇಬೇಕು. ಬಿಜೆಪಿ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ನೀವು ಪಕ್ಷಕ್ಕೆ ಮರಳಿ ಬನ್ನಿ ಎಂದಿದ್ದಾರೆ. ಆದರೆ ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ಮರಳಿ ಬರುತ್ತೇನೆ ಎಂದು ಹೇಳಿದ್ದೇನೆ ಎಂದರು.
ದೆಹಲಿಗೆ ನಿಯೋಗದೊಂದಿಗೆ ಹೋಗಿ ಅಮಿತ್ ಶಾ ಅವರನ್ನು ಭೇಟಿಯಾಗುವ ಕುರಿತು ಚರ್ಚೆ ನಡೆಸಲಾಯಿತು. ಏನೇ ಇದ್ದರೂ ನಾನು ಸುಮ್ಮನೆ ಬಿಜೆಪಿಗೆ ಹೋಗಲ್ಲ. ನನ್ನನ್ನು ಸಿಎಂ ಮಾಡುತ್ತಾರೆ ಅನ್ನುವುದಾದರೆ ಮಾತ್ರ ಹೋಗುತ್ತೇನೆ. ಇಲ್ಲವಾದಲ್ಲಿ ನಾವೇ ಜೆಸಿಬಿ ಪಕ್ಷವನ್ನು ಕಟ್ಟುತ್ತೇವೆ ಎಂದು ಹೇಳಿದರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…