ರಾಜ್ಯ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತ ಸಾಂತ್ವನ ಯಾತ್ರೆ ಕೈಗೊಳ್ಳುತ್ತೇನೆ: ಎಚ್‌ಡಿಕೆ

ಬೆಂಗಳೂರು : ಬರ, ವಿದ್ಯುತ್ ಕ್ಷಾಮ ಸೇರಿ ಅನೇಕ ಗಂಭೀರ ಸಮಸ್ಯೆಗಳಿಂದ ಬಸವಳಿದಿರುವ ರೈತ ಸಮುದಾಯಕ್ಕೆ ಧೈರ್ಯ ತುಂಬುವ ಸಲುವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತ ಸಾಂತ್ವನ ಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬರ ಅಧ್ಯಯನಕ್ಕಾಗಿ ಪಕ್ಷದ ಜಿಲ್ಲಾ ಮಟ್ಟದ ತಂಡಗಳನ್ನು ರಚನೆ ಮಾಡುವ ಸಂಬಂಧ ಕರೆಯಲಾಗಿದ್ದ ಮಹತ್ವದ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿ ಈ ವಿಷಯ ಪ್ರಕಟಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಕಳೆದ ಐದು ತಿಂಗಳಿನಿಂದ ವೈಫಲ್ಯಗಳ ಕೂಪದಲ್ಲಿ ಸಿಲುಕಿದೆ. ಈ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಎಲ್ಲದಕ್ಕೂ ಕೇಂದ್ರದ ಕಡೆಗೇ ಬೊಟ್ಟು ಮಾಡುವ ಪ್ರವೃತ್ತಿಯನ್ನು ರೂಢಿಸಿಕೊಂಡಿದೆ. ಇದು ಸರಿಯಲ್ಲ. ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಮಾಡುವ ಬದಲು ಕೇಂದ್ರದ ಬಳಿ ಹೋಗಿ ಪರಿಹಾರ ಕೇಳಬಹುದಿತ್ತಲ್ಲವೇ ಎಂದು ಸಿಎಂ ಹೇಳಿದ್ದಾರೆ. ಸಿಎಂ ಆದವರು ಹೇಳುವ ಮಾತೇ ಇದು? ಎಂದು ಅವರು ತರಾಟೆಗೆ ತೆಗೆದುಕೊಂಡರು.

ಕೇಂದ್ರ ಸರಕಾರ ಅನ್ನಭಾಗ್ಯಕ್ಕೆ ಅಕ್ಕಿ ಕೊಡುತ್ತಿಲ್ಲ ಎನ್ನುತ್ತಾರೆ. ವಿದ್ಯುತ್ ಕೊರತೆ ಆದಾಗ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಅಂತಾರೆ. ಎಲ್ಲದಕ್ಕೂ ಕೇಂದ್ರದ ಕಡೆಗೇ ಕೈ ತೋರಿಸುತ್ತಾರೆ. ಹಾಗಾದರೆ, ರಾಜ್ಯ ಸರಕಾರ ಎನ್ನುವುದು ಏತಕ್ಕೆ? ಇಲ್ಲಿ ಕೂತು ಇವರು ಏನು ಮಾಡುತ್ತಿದ್ದಾರೆ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಸಿಎಂ ಡಾನ್ಸ್ ಮಾಡುತ್ತಾರೆ! :

214 ತಾಲೂಕುಗಳಲ್ಲಿ ಬರ ಇದೆ ಅಂತ ಸರಕಾರವೇ ಕೇಂದ್ರಕ್ಕೆ ವರದಿ ಕೊಟ್ಟಿದೆ. ಎಸ್ ಡಿ ಆರ್ ಎಫ್ ನಲ್ಲಿ 529 ಕೋಟಿ ರೂ. ಹಣ ಇಟ್ಟಿದ್ದೇವೆ ಅಂತ ಹೇಳಿಕೆ ಕೊಟ್ಟಿದ್ದಾರೆ ಸಚಿವರು. ಎಲ್ಲಾ ಕಡೆ ಬರ ಪರಿಸ್ಥಿತಿ ಇದೆ ಎಂದು ಮಾದ್ಯಮಗಳಲ್ಲಿ ನಿತ್ಯವೂ ವರದಿಗಳು ಬರುತ್ತಿವೆ. ಮುಖ್ಯಮಂತ್ರಿಗಳು ಎಲ್ಲೋ ಹೋಗಿ ಡಾನ್ಸ್ ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ. ಜನರು ಕಷ್ಟದಲ್ಲಿದ್ದರೆ ಇವರಿಗೆ ಸಂಭ್ರಮವೋ ಸಂಭ್ರಮ! ಸಂಭ್ರಮ ಮಾಡಿಕೊಂಡು ಜನರನ್ನು ಅಣಕ ಮಾಡುತ್ತಿದ್ದಾರೆ. ಅಲ್ಲಿ ರೈತರ ಕಷ್ಟಕ್ಕೆ ಏನಾದರೂ ಪರಿಹಾರ ಕೊಟ್ಟು ಬಂದರಾ ಇವರು ಎಂದು ಕುಮಾರಸ್ವಾಮಿ ಅವರು ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಕಲಬುರಗಿ ನಾಯಕರೊಬ್ಬರು ಮೈಸೂರಿನಲ್ಲಿ ಏನೇನನ್ನೋ ಹೇಳಿದ್ದಾರೆ. ಬಿಜೆಪಿಗೆ ನಾಯಕರು ಜಾಬ್‌ ಲೆಸ್, ಜೆಡಿಎಸ್ ಪೀಪಲ್‌ ಲೆಸ್‌ ಎಂದಿದ್ದಾರೆ. ಅದೇನು ಎನ್ನುವುದನ್ನು ನಾವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ತೋರಿಸುತ್ತೇವೆ. ಆದರೆ, ಅವರು ಪ್ರತಿನಿಧಿಸುವ ಕಲಬುರಗಿ ಜಿಲ್ಲೆಯ ಜನರಿಗೆ ಏನು ಕೊಟ್ಟಿದ್ದಾರೆ ಎಂದು ಹೇಳಲಿ. ಆ ಜಿಲ್ಲೆಯಲ್ಲಿನ ತೊಗರಿ ಬೆಳೆಗಾರರ ಸಂಕಷ್ಟ ಗೊತ್ತಿದೆಯಾ ಅವರಿಗೆ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮಾಜಿ ಮುಖ್ಯಮಂತ್ರಿಗಳು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಪಕ್ಷದ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಬಂಡೆಪಪ್‌ ಕಾಶೆಂಪೂರ್‌, ವೆಂಕಟರಾವ್‌ ನಾಡಗೌಡ, ಆಲ್ಕೊಡ್‌ ಹನುಮಂತಪ್ಪ, ಶಾಸಕರಾದ ಸಮೃದ್ಧಿ ಮಂಜುನಾಥ್‌, ಸ್ವರೂಪ್‌ ಪ್ರಕಾಶ್‌, ನೇಮಿರಾಜ್‌ ನಾಯಕ್‌, ಮಾಜಿ ಶಾಸಕ ಆರ್.ಮಂಜಿನಾಥ್‌, ರಾಜಾ ವೆಂಕಟಪ್ಪ ನಾಯಕ್‌, ನಗರ ಜೆಡಿಎಸ್‌ ಅಧ್ಯಕ್ಷ ಹೆಚ್.ಎಂ.ರಮೇಶ್‌ ಗೌಡ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

andolanait

Recent Posts

ಹೆಣ್ಣು ಕಾನೂನನ್ನು ಅರಿತರೆ ಅಷ್ಟೇ, ದೌರ್ಜನ್ಯ ಎದುರಿಸಲು ಸಾಧ್ಯ: ನಾಗಲಕ್ಷ್ಮೀ ಚೌಧರಿ

ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…

23 mins ago

ಮೈಸೂರು:  ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…

41 mins ago

ಡಿ.ಕೆ.ಸಹೋದರರಿಗೆ ಮದುವೆ ಕರೆಯೋಲೆ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರಿಗೆ ನೀಡಿ…

47 mins ago

ಶುಚಿತ್ವ, ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡ ಜಯದೇವ :ಸಿ.ಎಂ ಪ್ರಶಂಸೆ

ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…

1 hour ago

ಪ್ರಹ್ಲಾದ್‌ ಜೋಶಿರವರ ಫೇಕ್‌ ಎನ್‌ಕೌಂಟರ್‌ ಹೇಳಿಕೆ: ಕೇಂದ್ರ ಸಚಿವ ಸ್ಥಾನಕ್ಕೆ ಶೋಭೆ ತರಲ್ಲ-ಎಚ್‌.ಕೆ.ಪಾಟೀಲ

ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್‌ ಎನ್‌ಕೌಂಟರ್‌ ಹೇಳಿಕೆ…

1 hour ago

ನ್ಯೂ ಇಯರ್‌ ಸೆಲಬ್ರೇಷನ್ | ಬೆಂಗಳೂರು ಪೊಲೀಸರಿಂದ ಹೊಸ ನಿಯಮ

ನ್ಯೂ ಇಯರ್ ಸೆಲಬ್ರೇಷನ್‌ಗೆ ದಿನಗಣನೆ ಬೆಂಗಳೂರು: 2024ನ್ನು ಮುಗಿಸಿ 2025ನ್ನು ಬರಮಾಡಿಕೊಳ್ಳಲು ಸಿಲಿಕಾನ್‌ ಸಿಟಿಯೇ ತುದಿಗಾಲಲ್ಲಿ ಕಾತರದಿಂದ ಕಾಯುತ್ತಿದೆ. ಸದ್ಯ…

2 hours ago