ಬೆಂಗಳೂರು: ಯಾವುದೋ ಒಂದು ಹಳೆಯ ಪ್ರಕರಣವನ್ನು ಕೆದಕಿ ನನ್ನನ್ನು ಬ್ಲ್ಯಾಕ್‌ಮೇಲ್ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸುಪ್ರೀಂನಲ್ಲಿರುವ ಪ್ರಕರಣವನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ರಾಜ್ಯಪಾಲರಿಗೂ ಅವಮಾನ ಮಾಡುತ್ತಿದೆ. ಜಂತಕಲ್ ಗಣಿ ಪ್ರಕರಣವು ಹೈಕೋರ್ಟ್‌ನಲ್ಲಿ ವಜಾ ಆಗಿದೆ. ಸಾಯಿ ವೆಂಕಟೇಶ್ವರ ಹಗರಣದಲ್ಲಿ ತನಿಖೆ ನಡೆಯಬೇಕಿದೆ. ಇದನ್ನೆಲ್ಲಾ ಇಟ್ಟುಕೊಂಡು ನನ್ನನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕಿಡಿಕಾರಿದರು.
ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಶಾಸಕರು ಹಾಗೂ ಸಚಿವರ ಮೂಲಕ ರಾಜ್ಯಪಾಲರಿಗೆ ಧಮ್ಕಿ ಹಾಕಿದ್ದಾರೆ. ತಾವು ಬಚಾವ್ ಆಗಲು ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಕಾಂಗ್ರೆಸ್‌ನಲ್ಲಿನ ಪಿತೂರಿಗೆ ಸಿದ್ದರಾಮಯ್ಯ ಬಲಿಪಶು ಆಗುತ್ತಿದ್ದಾರೆ. ಯಾರೋ ಒಬ್ಬರು ಸಿದ್ದರಾಮಯ್ಯ ಜೊತೆ ಬಂಡೆಯಂತೆ ನಿಲ್ಲುವೆ ಎಂದು ಸೋಗು ಹಾಕುತ್ತಿದ್ದಾರೆ. ಆ ಬಂಡೆಯಿಂದಲೇ ಸಿದ್ದರಾಮಯ್ಯರಿಗೆ ಅಪಾರ ಎದುರಾಗಿದೆ. ಆದರೆ ನಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…