ರಾಜ್ಯ

ಎಸ್‌ಐಟಿ ಕ್ರಮಗಳ ಬಗ್ಗೆ ಹೇಳಲು ನಾನು ವಕ್ತಾರನಲ್ಲ: ಗೃಹ ಸಚಿವ ಗರಂ

ಬೆಂಗಳೂರು: ಶಾಸಕ ಎಚ್‌.ಡಿ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ವರದಿ ನೀಡಲು ನಾನು ಎಸ್‌ಐಟಿ ವಕ್ತಾರನಲ್ಲ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಗರಂ ಆಗಿದ್ದಾರೆ.

ಎಚ್‌ಡಿ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿ, ಎಚ್‌ ಡಿ ರೇವಣ್ಣ ವಿರುದ್ಧ ದೂರು ದಾಖಲಾದ ಬಳಿಕವೇ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಎಸ್‌ಐಟಿ ತಂಡ ರೇವಣ್ಣ ಅವರನ್ನು ಮ್ಯಾಜಿಸ್ಟ್ರೇಟರ್‌ ಮುಂದೆ ನಿಲ್ಲಿಸುತ್ತಾರೆ ಮತ್ತು ಮುಂದೆ ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅವರು ತೀರ್ಮಾನಿಸುತ್ತಾರೆ. ಅದು ಎಸ್‌ಐಟಿ ಅವರ ಕೆಲಸವಾಗಿದ್ದು, ಅದರ ಬಗ್ಗೆ ಪ್ರತಿನಿತ್ಯ ವರದಿ ನೀಡಲು ನಾನು ವಕ್ತಾರನಲ್ಲ ಎಂದು ಕಿಡಿಕಾರಿದ್ದಾರೆ.

ಎಸ್‌ಐಟಿ ತಂಡ ಕಾನೂನಾತ್ಮಕವಾಗಿ ತನ್ನ ಕೆಲಸವನ್ನು ಮಾಡುವ ಮೂಲಕ ರೇವಣ್ಣ ಅವರನ್ನು ಬಂಧಿಸಿದೆ. ಇದು ಜೆಡಿಎಸ್‌ ನವರಿಗೆ ಸಹಜವಾಗಿಯೇ ನೋವುಂಟು ಮಾಡುತ್ತದೆ. ಎಸ್‌ಐಟಿ ನಿಯಮಾನುಸಾರ ಕೆಲಸ ಮಾಡದಿದ್ದರೇ ಮುಂದೊಂದು ದಿನ ಎಸ್‌ಐಟಿ ಮೇಲೂ ಆರೋಪ ಮಾಡಬಹುದು ಹಾಗಾಗಿ ಎಸ್‌ಐಟಿ ತನ್ನ ಕೆಲಸ ಮಾಡಿದೆ ಎಂದು ಸ್ಪಷ್ಟನೆ ನೀಡಿದರು.

ಇನ್ನು ಪ್ರಜ್ವಲ್‌ ರೇವಣ್ಣ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಅವರ ವಿರುದ್ಧ ಬ್ಲ್ಯೂ ಕಾರ್ನರ್‌ ನೋಟಿಸ್‌ ಜಾರಿ ಮಾಡಿದ್ದೇವೆ. ಇಂಟರ್‌ ಪೋಲ್‌ ನವರು ಎಲ್ಲಾ ದೇಶಗಳೊಂದಿಗೂ ಕಮ್ಯುನಿಕೇಟ್‌ ಮಾಡುತ್ತಿದ್ದಾರೆ. ಆಮೂಲಕ ಪ್ರಜ್ವಲ್‌ ಲೊಕೇಷನ್‌ ಕಂಡು ಹಿಡಿಯುತ್ತಿದ್ದಾರೆ. ಆ ನಂತರ ಪ್ರಜ್ವಲ್‌ ರನ್ನು ಹೇಗೆ ಸುರಕ್ಷಿತವಾಗಿ ಬಂಧಿಸಿ ಭಾರತಕ್ಕೆ ವಾಪಾಸ್‌ ಕರೆತರಬೇಕು ಎಂಬ ಬಗ್ಗೆ ಎಸ್‌ಐಟಿ ನಿರ್ಧರಿಸಲಿದೆ ಎಂದು ವಿವರಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

13 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago