Mysore
20
clear sky

Social Media

ಬುಧವಾರ, 28 ಜನವರಿ 2026
Light
Dark

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ.

ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಅಭ್ಯರ್ಥಿಗೆ ನೇಮಕಾತಿ ಆದೇಶದ ಪ್ರತಿಯನ್ನು ನೀಡಿ ಶುಭ ಹಾರೈಸಿದ್ದಾರೆ. ಮಹಾಂತೇಶ್‌ ಬೀಳಗಿ ಅವರ ಪುತ್ರಿ ಚೈತನ್ಯಾ ಎಮ್.ಬೀಲಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದರು.

ಈ ವೇಳೆ ಸಚಿವರಾದ ಎಚ್.ಕೆ.ಪಾಟೀಲ್‌, ಎಂ.ಬಿ.ಪಾಟೀಲ್‌, ಶಿವಾನಂದ ಪಾಟೀಲ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಉಪಸ್ಥಿತರಿದ್ದರು.

ಚೈತನ್ಯಾ ಎಂ ಬೀಳಗಿ ಅವರಿಗೆ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕ ಹುದ್ದೆ ಸಿಕ್ಕಿದ್ದು, ವೇತನ ಶ್ರೇಣಿ 49,050 ರಿಂದ 92,500 ರೂ ಇರಲಿದೆ.

Tags:
error: Content is protected !!