ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ.
ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಅಭ್ಯರ್ಥಿಗೆ ನೇಮಕಾತಿ ಆದೇಶದ ಪ್ರತಿಯನ್ನು ನೀಡಿ ಶುಭ ಹಾರೈಸಿದ್ದಾರೆ. ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಎಮ್.ಬೀಲಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದರು.
ಈ ವೇಳೆ ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಉಪಸ್ಥಿತರಿದ್ದರು.
ಚೈತನ್ಯಾ ಎಂ ಬೀಳಗಿ ಅವರಿಗೆ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕ ಹುದ್ದೆ ಸಿಕ್ಕಿದ್ದು, ವೇತನ ಶ್ರೇಣಿ 49,050 ರಿಂದ 92,500 ರೂ ಇರಲಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…