ರಾಜ್ಯ

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ.

ಇದರಿಂದ ಕಾನೂನು ಹೋರಾಟದಲ್ಲಿ ರೂಪಾ ಮೌದ್ಗಿಲ್ ಅವರಿಗೆ ಮೇಲುಗೈ ಸಿಕ್ಕಿದ್ದು, ರೋಹಿಣಿ ಸಿಂಧೂರಿ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಸದ್ಯ ಪ್ರಕರಣವು ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ನಲ್ಲಿ ಮುಂದುವರಿಯುತ್ತಿದೆ.

ಪ್ರಕರಣ ಹಿನ್ನೆಲೆ
“ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್ ಅಧಿಕಾರಿ ರೂಪಾ ನನ್ನ ವಿರುದ್ಧ ವೈಯಕ್ತಿಕ ಹಗೆ ಸಾಧಿಸಲು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವವರ ರೀತಿಯಲ್ಲಿ ವರ್ತಿಸುತ್ತಿದ್ದಾರೆ…” “ಸದಾ ಸುದ್ದಿಯಲ್ಲಿರಬೇಕೆಂದು ಬಯಸುವ ರೂಪಾ… ಕೀಳುಮಟ್ಟದ ಪ್ರವೃತ್ತಿ ಪ್ರದರ್ಶಿಸುತ್ತಿದ್ದಾರೆ.” “ಉನ್ನತ ಸ್ಥಾನದಲ್ಲಿರುವ ರೂಪಾ ಒಳ್ಳೆಯ ಕೆಲಸಗಳತ್ತ ಗಮನಹರಿಸುವುದನ್ನು ಬಿಟ್ಟು… ನನ್ನ ವಿರುದ್ಧ ಸುಳ್ಳು, ವೈಯಕ್ತಿಕ ನಿಂದನೆ ಅಭಿಯಾನ ನಡೆಸುತ್ತಿದ್ದಾರೆ.” ಎಂದು ರೋಹಿಣಿ ಸಿಂಧೂರು ಮಾಧ್ಯಮ ಅವರು ರೂಪಾ ಮೌದ್ಗಿಲ್ ವಿರುದ್ಧ ಪ್ರಕಟಣೆಯಲ್ಲಿ ಹೊರಡಿಸಿದ್ದರು.

ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿತ್ತು (ಸುಮಾರು 1.8 ಲಕ್ಷ ವೀಕ್ಷಣೆಗಳು). ಇದರಿಂದ ರೂಪಾ ಮೌದ್ಗಿಲ್ ಅವರಿಗೆ ಮಾನಸಿಕ ಯಾತನೆ, ಕುಟುಂಬಕ್ಕೂ ತೊಂದರೆ ಉಂಟಾಗಿದೆ ಎಂದು ಆರೋಪಿಸಿ, ಅವರು ಮಾನಹಾನಿ ಪ್ರಕರಣ ಹೂಡಿದ್ದರು. ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರಕರಣ ಸ್ವೀಕರಿಸಿ ಸಿಂಧೂರಿಗೆ ನೋಟಿಸ್ ಜಾರಿ ಮಾಡಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago