ರಾಜ್ಯ

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಈ ಪತ್ರವು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ನಡುವಿನ ಬಾಂಧವ್ಯವನ್ನು ಮತ್ತು ಸೈದ್ಧಾಂತಿಕ ಒಗ್ಗಟ್ಟನ್ನು ಎತ್ತಿ ತೋರಿಸುವ ಪ್ರಯತ್ನವಾಗಿದೆ. ಶಿವಕುಮಾರ್ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಸೈದ್ಧಾಂತಿಕ ಬದ್ಧತೆ: ಯಾವುದೇ ಕಾರಣಕ್ಕೂ ಪಕ್ಷದ ಸಿದ್ಧಾಂತದ ವಿಷಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಸೈದ್ಧಾಂತಿಕ ನಿಲುವುಗಳು ಪಕ್ಷದ ಅಡಿಪಾಯ ಎಂದು ಸಿದ್ದರಾಮಯ್ಯ ಅವರು ಒತ್ತಿ ಹೇಳಿದ್ದಾರೆ.

‘ಕೋಟಿ ಕನ್ನಡಿಗರು ನಿಮ್ಮೊಂದಿಗಿದ್ದಾರೆ’ ಎಂದು ಧೈರ್ಯ ತುಂಬುವ ಮೂಲಕ, ಜನಪರವಾದ ಕೆಲಸಗಳನ್ನು ಮಾಡುವುದನ್ನು ಮುಂದುವರಿಸಿ, ನಿಮ್ಮ ಹೋರಾಟಕ್ಕೆ ಜನರ ಆಶೀರ್ವಾದವಿದೆ ಎಂದು ಸಂದೇಶ ನೀಡಿದ್ದಾರೆ. ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಧೃತಿಗೆಡದೆ, ಪಕ್ಷವನ್ನು ಬಲಪಡಿಸುವ ಮತ್ತು ಸಂಘಟಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು… ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಯಾತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ.

ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಽಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ.

‘ಈಗ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ’
ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ಧ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ಧಿಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ಧತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು.

ಸೈದ್ಧಾಂತಿಕವಾಗಿ ಎಂದೂ ಸೋಲಬಾರದು
ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡ ನಮ್ಮೆಲ್ಲರ ಮೇಲಿದೆ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ.
ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ.
ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ.

ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ. ನಿಮಗೆ ಸದಾ ಯಶಸ್ಸು ಸಿಗಲಿ ಎಂದು ಸಿದ್ದರಾಮಯ್ಯ ಅವರು ಶಿವಕುಮಾರ್ ಅವರಿಗೆ ಹಾರೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೊಸ ರಾಜ್ಯಪಾಲರು ರಾಜ್ಯದ ಪ್ರಗತಿಗೆ ಮಾರ್ಗದರ್ಶನ ನೀಡಲಿ

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…

47 seconds ago

ಓದುಗರ ಪತ್ರ: ದರ ವ್ಯತ್ಯಾಸ: ಗ್ರಾಹಕರ ಹಿತವೇ ಮುಖ್ಯ

ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…

4 mins ago

ದೇವಭೂಮಿ ದ್ವಾರಕಾದ ‘ಮೀಟಾಪುರ್ ಮದರ್ ಥೆರೇಸಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ  ಮದರ್ ಥೆರೇಸಾ ಈಗ ನಮ್ಮ…

7 mins ago

‘ಸರೆಂಡರ್ ಆದ ಹುಡುಗರು ಬೇರೆ ಕಥೆ ಹೇಳುತ್ತಿದ್ದಾರೆ!?’

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್‌ಐ…

15 mins ago

ಮಡಿಕೇರಿ ದಸರಾ: ಕೆಎಸ್‌ಆರ್‌ಟಿಸಿ ಪ್ರವಾಸಿ ಪ್ಯಾಕೇಜ್

ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ  ಮಡಿಕೇರಿ:…

28 mins ago

ದಸರಾ ಖರ್ಚಿನ ಭಾರ ಇಳಿಸಿದ ಟಿಕೆಟ್ ಮಾರಾಟದ ಆದಾಯ

ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…

48 mins ago