Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಕುಮಾರಸ್ವಾಮಿ ಅಧಿಕಾರಕ್ಕಾಗಿ ಏನು ಬೇಕಾದ್ರೂ ಮಾಡ್ತಾರೆ: ಸಚಿವ ಎಂ.ಬಿ.ಪಾಟೀಲ್‌ ಕಿಡಿ

ಬೆಂಗಳೂರು: ಅಧಿಕಾರಕ್ಕಾಗಿ ಕುಮಾರಸ್ವಾಮಿ ಏನು ಬೇಕಾದರೂ ಮಾಡ್ತಾರೆ, ಎಲ್ಲಿಗೆ ಬೇಕಾದರೂ ಹೋಗ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಕಿಡಿಕಾರಿದ್ದಾರೆ.

ರಾಮನಗರದಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳು. ಕುಮಾರಸ್ವಾಮಿ ವಿಧಾನಸಭೆಯಲ್ಲಿ 40 ಸೀಟ್‌ ಬರುತ್ತೆ ಅಂತಾ ತೀವ್ರ ಸಂತೋಷದಲ್ಲಿದ್ದರು. ಆಗ ಬಿಜೆಪಿ ಅಥವಾ ಕಾಂಗ್ರೆಸ್‌ನವರು ನಮ್ಮ ಬಳಿ ಬರುತ್ತಾರೆ ಎಂದು ನಂಬಿಕೊಂಡಿದ್ದರು. ಆದರೆ ರಾಜ್ಯದ ಜನರ ಅದನ್ನೆಲ್ಲಾ ಬುಡಮೇಲು ಮಾಡಿದರು ಎಂದು ಲೇವಡಿ ಮಾಡಿದರು.

ಕುಮಾರಸ್ವಾಮಿಯವರಿಗೆ ಸಿದ್ಧಾಂತ ಮುಖ್ಯವಲ್ಲ. ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಎಲ್ಲಿಗೆ ಬೇಕಾದರೂ ಹೋಗುತ್ತಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ಜನರ ಪರವಿದ್ದು, ಎಲ್ಲರಿಗೂ ಆಸರೆಯಾಗಲಿದೆ. ಗ್ಯಾರಂಟಿ ಯೋಜನೆಗಳಿಂದ ಎಲ್ಲರಿಗೂ ತುಂಬಾ ಅನುಕೂಲ ಆಗುತ್ತಿದೆ. ನಮ್ಮ ಸರ್ಕಾರ ರೈತರ ಪರವಿದ್ದು, ಬರ ಪರಿಹಾರ ಹಾಗೂ ನೆರೆ ಪರಿಹಾರವನ್ನು ಸಹ ನೀಡಲಾಗುತ್ತದೆ. ಹೀಗಾಗಿ ಯಾರೂ ಕೂಡ ಭಯಪಡುವ ಅವಶ್ಯಕತೆಯಿಲ್ಲ. ನಮ್ಮ ಸರ್ಕಾರವನ್ನು ಯಾರೂ ಏನೂ ಮಾಡಲು ಆಗಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧ ಕಿಡಿಕಾರಿದರು.

 

 

 

Tags: