ಬೆಂಗಳೂರು: ಅಧಿಕಾರಕ್ಕಾಗಿ ಕುಮಾರಸ್ವಾಮಿ ಏನು ಬೇಕಾದರೂ ಮಾಡ್ತಾರೆ, ಎಲ್ಲಿಗೆ ಬೇಕಾದರೂ ಹೋಗ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.
ರಾಮನಗರದಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು. ಕುಮಾರಸ್ವಾಮಿ ವಿಧಾನಸಭೆಯಲ್ಲಿ 40 ಸೀಟ್ ಬರುತ್ತೆ ಅಂತಾ ತೀವ್ರ ಸಂತೋಷದಲ್ಲಿದ್ದರು. ಆಗ ಬಿಜೆಪಿ ಅಥವಾ ಕಾಂಗ್ರೆಸ್‌ನವರು ನಮ್ಮ ಬಳಿ ಬರುತ್ತಾರೆ ಎಂದು ನಂಬಿಕೊಂಡಿದ್ದರು. ಆದರೆ ರಾಜ್ಯದ ಜನರ ಅದನ್ನೆಲ್ಲಾ ಬುಡಮೇಲು ಮಾಡಿದರು ಎಂದು ಲೇವಡಿ ಮಾಡಿದರು.
ಕುಮಾರಸ್ವಾಮಿಯವರಿಗೆ ಸಿದ್ಧಾಂತ ಮುಖ್ಯವಲ್ಲ. ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಎಲ್ಲಿಗೆ ಬೇಕಾದರೂ ಹೋಗುತ್ತಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ಜನರ ಪರವಿದ್ದು, ಎಲ್ಲರಿಗೂ ಆಸರೆಯಾಗಲಿದೆ. ಗ್ಯಾರಂಟಿ ಯೋಜನೆಗಳಿಂದ ಎಲ್ಲರಿಗೂ ತುಂಬಾ ಅನುಕೂಲ ಆಗುತ್ತಿದೆ. ನಮ್ಮ ಸರ್ಕಾರ ರೈತರ ಪರವಿದ್ದು, ಬರ ಪರಿಹಾರ ಹಾಗೂ ನೆರೆ ಪರಿಹಾರವನ್ನು ಸಹ ನೀಡಲಾಗುತ್ತದೆ. ಹೀಗಾಗಿ ಯಾರೂ ಕೂಡ ಭಯಪಡುವ ಅವಶ್ಯಕತೆಯಿಲ್ಲ. ನಮ್ಮ ಸರ್ಕಾರವನ್ನು ಯಾರೂ ಏನೂ ಮಾಡಲು ಆಗಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…