ರಾಜ್ಯ

ಈಗ ಚುನಾವಣೆ ನಡೆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ: ಬಿಎಸ್‌ವೈ

ಬೆಂಗಳೂರು: ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದು, ಎನ್‌ಡಿಎ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲೂ ಬಿಜೆಪಿ-ಜೆಡಿಎಸ್‌ ಕೂಟ 19 ಸ್ಥಾನಗಳನ್ನು ಗೆದ್ದಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 142 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಈಗ ಚುನಾವಣೆ ನಡೆದರೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಏರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ದಿವಾಳಿಯತ್ತ ನಡೆದಿದೆ. ಅನುಪಯುಕ್ತ ಗ್ಯಾರಂಟಿಗಳ ಕಾರಣಕ್ಕೆ ಬೆಲೆ ಏರಿಕೆ ನಿರಂತರವಾಗಿ ಮುಂದುವರಿದಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ. ಕಾಂಗ್ರೆಸ್‌ ಪಕ್ಷ ಅವನತಿಯತ್ತ ಸಾಗುತ್ತಿದೆ. ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರ ಸರ್ಕಾರವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ಈಗ ರಾಜ್ಯದಲ್ಲಿ ಚುನಾವಣೆ ನಡೆದರೆ ಬಿಜೆಪಿ-ಜೆಡಿಎಸ್‌ ಪಕ್ಷ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್‌ ಪಕ್ಷ ಸಂಪೂರ್ಣ ಅವನತಿಯತ್ತ ಸಾಗುತ್ತಿದೆ. ರಾಜ್ಯ ಸರ್ಕಾರದ ನಡೆಯಿಂದ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಜನಸಾಮಾನ್ಯರಿಗೂ ಸಂವಿಧಾನದ ಮಹತ್ವ ತಿಳಿಯಬೇಕು

ನವೆಂಬರ್ ೨೬ರಂದು ಆಚರಿಸಲಾಗುವ ಸಂವಿಧಾನ ದಿನಾಚರಣೆ ಕೇವಲ ಸರ್ಕಾರ, ರಾಜಕಾರಣಿಗಳು, ಜನಪ್ರತಿನಿಧಿಗಳು, ಸರ್ಕಾರಿ ಕಚೇರಿಗಳು ಹಾಗೂ ಶಾಲಾ-ಕಾಲೇಜುಗಳಿಗೆ ಸೀಮಿತವಾಗಬಾರದು. ಕಟ್ಟಕಡೆಯ…

29 seconds ago

ದಸರಾಗೆ ಅದ್ಭುತ ಬ್ರ್ಯಾಂಡಿಂಗ್ ಅಗತ್ಯ

ಗಿರಿಧರ ಗುಂಜಗೋಡು, ಐಟಿ ಉದ್ಯೋಗಿ ಮತ್ತು ಪ್ರವಾಸಿ ಲೇಖಕ ಅರಮನೆ ಸುತ್ತಮುತ್ತ ಖಾಸಗಿ ವಾಹನಗಳ ನಿಷೇಧವಿರಲಿ ಮೈಸೂರಿಗರಿಗೆ ಇಲ್ಲಿನ ಇತಿಹಾಸ,…

6 mins ago

ಊನಗೊಂಡ ಕಾಲುಗಳಲ್ಲೇ ಟ್ರೆಕ್ಕಿಂಗ್ ಮಾಡಿದ ಶಿಜೋಯ್

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಾಂಬೋಡಿಯಾದಿಂದ ವಿಯಾಟ್ನಾಮ್‌ಗೆ ಸೈಕಲ್ ತುಳಿದ ಧೀರ  ಮುಂಬೈಯ ವಿಕ್ರೋಲಿ ಎಂಬಲ್ಲಿನ ಶಿಜೊಯ್  ಜಾಕೋಬ್ ಹುಟ್ಟಿದಾಗ…

12 mins ago

ಮಲೆನಾಡಿನಲ್ಲಿ ಏಲಕ್ಕಿ ಕೃಷಿ ಅವಸಾನದತ್ತ

ಲಕ್ಷ್ಮೀಕಾಂತ್ ಕೊಮಾರಪ್ಪ ಅಕಾಲಿಕ ಮಳೆ, ರೋಗಬಾಧೆ, ಕಾರ್ಮಿಕರ ಕೊರತೆ  ಸೋಮವಾರಪೇಟೆ: ಮಲೆನಾಡಿನ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದ್ದ ಏಲಕ್ಕಿ ಕೃಷಿ…

22 mins ago

ಬೀದಿಬದಿ ವ್ಯಾಪಾರಿಗಳಿಗೆ ಕೊನೆಗೂ ಸುಸಜ್ಜಿತ ಮಾರುಕಟ್ಟೆ ಸೌಲಭ್ಯ

ಎಂ.ನಾರಾಯಣ ತಿ.ನರಸೀಪುರ: ನ.೨೯ರಂದು ಮಾಜಿ ಸಿಎಂ ಸಿದ್ದರಾಮಯ್ಯ, ಗಣ್ಯರಿಂದ ಉದ್ಘಾಟನೆ ತಿ.ನರಸೀಪುರ: ಪಟ್ಟಣದ ಸೌಂದರ್ಯೀಕರಣ ಹಾಗೂ ಬೀದಿಬದಿ ವ್ಯಾಪಾರಿಗಳಿಗೆ ವ್ಯವಸ್ಥಿತ…

28 mins ago