Mysore
18
broken clouds

Social Media

ಶನಿವಾರ, 31 ಜನವರಿ 2026
Light
Dark

ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಎಚ್.ಡಿ.ಕುಮಾರಸ್ವಾಮಿ ಆಗ್ರಹ

hd kumaraswamy

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕತೆ ಇದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ದುರಂತದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜೀನಾಮೆ ಕೊಡಬೇಕು. ನೈತಿಕತೆ ಇದ್ದರೆ ಸಿಎಂ ರಾಜೀನಾಮೆ ಕೊಡುತ್ತಾರೆ. ಇಲ್ಲವಾದರೆ ಏನು ಮಾಡಲು ಸಾಧ್ಯ? ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ:- ಕಾಲ್ತುಳಿತ ದುರಂತ ಪ್ರಕರಣ| ಸಾವಿನ ಬಗ್ಗೆ ಗೊತ್ತಿದ್ದರೆ ವೇದಿಕೆಯನ್ನೇ ಹತ್ತುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ ಬೇಸರ

ನಾನು ಹೇಳಿದ ಮೇಲೆ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರನ್ನು ತೆಗೆದು ಹಾಕಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡುವ ಅಗತ್ಯವಿರಲಿಲ್ಲ ಎಂದು ಹೇಳಿದರು.

Tags:
error: Content is protected !!