ರಾಜ್ಯ

2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರಲಿಲ್ಲ : ಡಾ.ಜಿ.ಪರಮೇಶ್ವರ್‌

ತುಮಕೂರು : 2013ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸೋತೆ. ಬಹುಶಃ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಉಪಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ಇಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನನ್ನ ಹಣೆಬರಹವೋ ಏನೋ ಗೊತ್ತಿಲ್ಲ. ನಾನು ಆಗ ಸೋತ ಕಾರಣಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು ಎಂದು ತಮ್ಮ ರಾಜಕೀಯ ಜೀವನ ನಡೆದು ಬಂದು ಹಾದಿ ನೆನದು ಭಾವುಕರಾದರು.

ರಾಜಕೀಯಕ್ಕೆ ಹೋಗಬೇಕೆಂಬ ಕಲ್ಪನೆಯೂ ಕೂಡ ಇರಲಿಲ್ಲ. ಕಾಲೇಜು ದಿನಗಳಲ್ಲಿ ಯೂತ್​ ಕಾಂಗ್ರೆಸ್​, ಎನ್​ಎಸ್​ಯುಐನಲ್ಲಿ ಓಡಾಡುತ್ತಿರಲಿಲ್ಲ. ವ್ಯಾಸಂಗ ಮಾಡುತ್ತಿದ್ದೆ. ರಾಜಕೀಯ ಪ್ರವೇಶ ಆಕಸ್ಮಿಕವಾಗಿ ಆಯಿತು. ರಾಜೀವ್‌ ಗಾಂಧಿ ಪ್ರಧಾನಿಯಾಗಿದ್ದಾಗ ನಮ್ಮ ಕ್ಯಾಂಪಸ್​ಗೆ ಭೇಟಿ ನೀಡಿದ್ದರು. ಅವರು ಕರೆ ಕೊಟ್ಟಿದ್ದರಿಂದ ಕಾಂಗ್ರೆಸ್​ ಪಕ್ಷ ಸೇರಿಕೊಂಡೆ ಎಂದರು.

ರಾಜಕೀಯಕ್ಕೆ ಬಂದು 40 ವರ್ಷ ಆಗುತ್ತಿದೆ. ಇಷ್ಟು ವರ್ಷಗಳಲ್ಲಿ ಸ್ವಲ್ಪ ಕೆಲಸ ಮಾಡಿದ್ದೇನೆ, ಇಲ್ಲದಿದ್ದರೆ ಯಾರೂ ಗುರುತಿಸುವುದಿಲ್ಲ. ಪಕ್ಷ ಎಲ್ಲಾ ಹುದ್ದೆಯನ್ನೂ ಕೊಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಹಿಡಿದು ಪಕ್ಷದಲ್ಲಿ ವರ್ಕಿಂಗ್​ ಕಮಿಟಿಯಲ್ಲಿಯೂ ಸ್ಥಾನ ಕೊಟ್ಟಿದ್ದಾರೆ. ದೆಹಲಿಯಲ್ಲಿ ಎಐಸಿಸಿ ವರ್ಕಿಂಗ್​ ಕಮಿಟಿಯಲ್ಲಿಯೂ ಸದಸ್ಯನನ್ನಾಗಿ ಮಾಡಿದ್ದರು. ಅದಾದ ನಂತರ 2018ರಲ್ಲಿ ಉಪಮುಖ್ಯಮಂತ್ರಿ ಮಾಡಿದರು ಎಂದು ಹೇಳಿದರು.

2018ರಲ್ಲಿ ಪಕ್ಷ 80 ಸೀಟು ಗೆದ್ದಿತ್ತು. 30 ಸೀಟುಗಳನ್ನು ಗೆದ್ದಿದ್ದ ಜೆಡಿಎಸ್​ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ಮಾಡಿದಾಗ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಅಂದೂ ಕೂಡ ನನ್ನನ್ನು ಮುಖ್ಯಮಂತ್ರಿ ಮಾಡಬಹುದಿತ್ತು, ಅದ್ರೆ ಎರಡನೇ ಸಲವೂ ಸಫಲ ಆಗಲ್ಲ. ಈ ಬಾರಿ ಅವಕಾಶ ಸಿಗಲಿದೆ ಎಂದು ತಿಳಿದಿದ್ದೆ. ಆದ್ರೆ ರಾಜಕೀಯ ಗೊತ್ತಲ್ಲ, ತೀರ್ಮಾನಗಳು ಹೇಗೇಗೋ ಆಗುತ್ತವೆ. ಹೀಗಾಗಿ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದಾರೆ. ರಾಜ್ಯದ ಜನ ನಮ್ಮನ್ನು ಗುರುತಿಸಿದ್ದಾರೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago