ರಾಜ್ಯ

ನಾಯಕರೇ ಸುಳ್ಳುಕೋರರಾದರೆ ಅನುಯಾಯಿಗಳು ಸತ್ಯವಂತರಾಗಲು ಹೇಗೆ ಸಾಧ್ಯ? ಮೋದಿಗೆ ಸಿದ್ದರಾಮಯ್ಯ ಟಾಂಗ್‌

ಬೆಂಗಳೂರು: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜಕುಟುಂಬದ ಎಟಿಎಂ ಆಗಿದೆ ಎಂದು ವಾಗ್ದಾಳಿ ನಡೆಸಿದ್ದರು. ಸದ್ಯ ಈ ಕುರಿತು ಗರಂ ಆಗಿರುವ ಸಿಎಂ ಸಿದ್ದರಾಮಯ್ಯ ಮೋದಿ ವಿರುದ್ಧ ಕಿಡಿಕಾರಿ, ರಾಜ್ಯ ಬಿಜೆಪಿ ನಾಯಕರ ಹುಳುಕುಗಳನ್ನು ಮತ್ತೊಮ್ಮೆ ಬಿಚ್ಚಿಟ್ಟಿದ್ದಾರೆ.

ಈ ಕುರಿತು ಮಾದ್ಯಮ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ ಸೋಲಿನ ದು:ಸ್ವಪ್ನದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಹೊರಬಂದಿಲ್ಲ ಎಂದು ಕಾಣಿಸುತ್ತದೆ. ಹೋದಲ್ಲಿ ಬಂದಲ್ಲಿ ಮೋದಿಯವರು ಕರ್ನಾಟಕವನ್ನು ಮತ್ತೆ ಮತ್ತೆ ತಮ್ಮ ಭಾಷಣದಲ್ಲಿ ಎಳೆದು ತರುತ್ತಿದ್ದಾರೆ. ಕರ್ನಾಟಕದ ಮದ್ಯ ಮಾರಾಟಗಾರರು ನೀಡಿರುವ ರಾಜಕೀಯ ಪ್ರೇರಿತ ದೂರು ಅಷ್ಟು ಬೇಗ ಮೋದಿಯವರನ್ನು ತಲುಪಿ ಬಿಟ್ಟಿದೆ. ಕೊರೊನಾ ಕಾಲದ ಭ್ರಷ್ಟಾಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರನ್ನು ಪ್ರಾಸಿಕ್ಯೂಟ್ ಮಾಡುವಂತೆ ನಿವೃತ್ತ ನ್ಯಾಯಮೂರ್ತಿಯವರ ನೇತೃತ್ವದ ತನಿಖಾ ಸಮಿತಿ ಮಾಡಿರುವ ಶಿಫಾರಸಿನ ಸುದ್ದಿ ಅವರಿಗಿನ್ನೂ ತಲುಪಿಲ್ಲ ಎಂದು ಕಾಣುತ್ತಿದೆ ಎಂದು ಕಾಲೆಳೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೇ ಕೊರೊನಾ ಕಾಲದಲ್ಲಿ ಅಸಹಾಯಕ ಜನ ಸಾಯುತ್ತಿರುವಾಗ ಅಧಿಕಾರದಲ್ಲಿದ್ದ ನಿಮ್ಮ ಪಕ್ಷದ ಸರ್ಕಾರ ಸಾವಿನ ವ್ಯಾಪಾರ ಮಾಡುತ್ತಿದ್ದದ್ದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ನಿಮ್ಮ ಪಕ್ಷದ ಸರ್ಕಾರ 40% ಕಮಿಷನ್ ಸುಲಿಗೆ ನಡೆಸುತ್ತಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರು ನಿಮಗೆ ಖುದ್ದಾಗಿ ದೂರು ನೀಡಿದರೂ ಆ ಬಗ್ಗೆ ನೀವು ತುಟಿ ಬಿಚ್ಚಿರಲಿಲ್ಲ. ಸಚಿವರೊಬ್ಬರ ಕಿರುಕುಳದಿಂದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡರೂ ನೀವು ಪ್ರತಿಕ್ರಿಯಿಸಿರಲಿಲ್ಲ. ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಬೆಳಗೆದ್ದು ಘೋಷಣೆ ಕೂಗುವ ನೀವು ತಮ್ಮ ಮನೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುವುದಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಕಾರ್ಯಕ್ರಮಗಳನ್ನು ನೂರಕ್ಕೆ ನೂರರಷ್ಟು ನಾವು ಅನುಷ್ಠಾನಕ್ಕೆ ತಂದಿದ್ದರೂ ಮಹಾರಾಷ್ಟ್ರದಲ್ಲಿ ನಿಮ್ಮ ಪಕ್ಷ ಸುಳ್ಳು ಹೇಳುವ ಜಾಹೀರಾತು ಪ್ರಕಟಿಸುತ್ತದೆ. ನೀವು ಹೇಳುತ್ತಾ ಬಂದಿರುವ ಸುಳ್ಳುಗಳಿಂದಲೇ ಅವರು ಪ್ರೇರಣೆ ಪಡೆದುಕೊಂಡಿರುವುದು ಸ್ಪಷ್ಟ. ನಾಯಕರೇ ಸುಳ್ಳುಕೋರರಾದರೆ ಅನುಯಾಯಿಗಳು ಸತ್ಯವಂತರಾಗಲು ಹೇಗೆ ಸಾಧ್ಯ? ಆಗಿರುವ ತಪ್ಪನಾದರೂ ಒಪ್ಪಿಕೊಂಡು ಕ್ಷಮೆ ಕೇಳಿ ಎಂದು ನಾನು ನಿಮ್ಮನ್ನು ಕೋರಿದ್ದೆ. ಆದರೆ ನೀವು ಇಲ್ಲಿಯ ವರೆಗೆ ಪ್ರತಿಕ್ರಿಯಿಸಿಲ್ಲ, ಯಾಕೆ? ಎಂದು ಕೇಳಿದ್ದಾರೆ.

ಕರ್ನಾಟಕದಲ್ಲಿ ಯಶಸ್ವಿಯಾಗಿ ಜಾರಿಗೊಂಡಿರುವ ಗ್ಯಾರಂಟಿ ಯೋಜನೆಗಳು ನಿಮ್ಮ ಕಣ್ಣು ಕುಕ್ಕುತ್ತಿರುವುದನ್ನು ನಾವು ಅರ್ಥಮಾಡಿಕೊಳ್ಳಬಲ್ಲೆವು. ಇದಕ್ಕಾಗಿ ಕರ್ನಾಟಕದ ಕಾಲೆಳೆಯುತ್ತಲೇ ಇದ್ದೀರಿ. ಕರ್ನಾಟಕಕ್ಕೆ ಬರುವ ಹುಮ್ಮಸ್ಸಿನಲ್ಲಿರುವ ಉದ್ಯಮಿಗಳನ್ನು ನಿಮ್ಮ ಸ್ಥಾನದ ಬಲದಿಂದ ತಡೆದು ಗುಜರಾತ್ ಗೆ ಕರೆದೊಯ್ದು ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದ್ದೀರಿ. ನಮ್ಮ ಆದಾಯವನ್ನು ಕುಂಠಿತಗೊಳಿಸಬೇಕೆಂಬ ದುರುದ್ದೇಶದಿಂದ ನಮ್ಮ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದ್ದೀರಿ. ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರದೆ ಇದ್ದರೆ ಪ್ರಧಾನಿಯವರು ಕನ್ನಡಿಗರು ಪ್ರಧಾನಿ ಕೋಪಕ್ಕೆ ತುತ್ತಾಗಲಿದ್ದಾರೆ ಎಂದು ಕಳೆದ ಚುನಾವಣೆಯ ಕಾಲದಲ್ಲಿ ನಿಮ್ಮ ಪಕ್ಷದ ಅಧ್ಯಕ್ಷರಾದ ಜೆ.ಪಿ.ನಡ್ಡಾ ನೀಡಿದ್ದ ಎಚ್ಚರಿಕೆ ಇಂದು ನಿಜವಾಗುತ್ತಿದೆ. ನೀವು ನಿರಂತರವಾಗಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ಮತ್ತು ಅಪಮಾನವನ್ನು ಕನ್ನಡಿಗರು ಬಹಳ ದಿನ ಸಹಿಸಲಾರರು. ನರೇಂದ್ರ ಮೋದಿ ಅವರೇ, ಮೊದಲು ನೀವು ನಮ್ಮೆಲ್ಲರಿಗೆ ಸೇರಿರುವ ದೇಶದ ಪ್ರಧಾನಿಯಾಗಿ, ಕೇವಲ ಪಕ್ಷದ ಪ್ರಚಾರಕನಾಗಿ ಪ್ರಧಾನಿ ಹುದ್ದೆಯ ಗೌರವ ಕಳೆದುಕೊಳ್ಳಬೇಡಿ. ಇದು ನನ್ನ ಸವಿನಯ ಮನವಿ ಎಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಮುಡಾ ಕಚೇರಿಗೆ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಭೇಟಿ

ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇಂದು ತನಿಖೆಯ ಭಾಗವಾಗಿ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು…

7 hours ago

ಪ್ರಧಾನಿ ನರೇಂದ್ರ ಮೋದಿ ಸಂವಿಧಾನವನ್ನೇ ಓದಿಲ್ಲ ಎಂದ ರಾಹುಲ್‌ ಗಾಂಧಿ

ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನೇ ಓದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿಯಿದೆ ಎಂದು ಲೋಕಸಭೆ ವಿರೋಧ ಪಕ್ಷದ…

7 hours ago

ಆದಿವಾಸಿಗಳ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಉದ್ಬೂರು ಹಾಡಿ ಹಾಗೂ ಕೆರೆಹಾಡಿಗೆ ಸಿಎಂ ಸಿದ್ದರಾಮಯ್ಯ ಅವರಿಂದು ಭೇಟಿ ನೀಡಿ, ಆದಿವಾಸಿಗಳ…

7 hours ago

ರಾಜ್ಯದಲ್ಲಿ ನವೆಂಬರ್.‌14ರಿಂದ ಮತ್ತೆ ಮಳೆಯ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ನಿಲ್ಲುವ ಮುನ್ಸೂಚನೆ ಕಾಣುತ್ತಿಲ್ಲ. ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ…

7 hours ago

ಶಬರಿಮಲೆಗೆ ತೆರಳುವವರಿಗೆ ಸಿಹಿಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ವೋಲ್ವೋ ಬಸ್…

8 hours ago

ಕಾಂಗ್ರೆಸ್‌ ವಿರುದ್ಧ ಮತ್ತೆ ಗುಡುಗಿದ ಪ್ರಧಾನಿ ನರೇಂದ್ರ ಮೋದಿ

ಮುಂಬೈ: ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್‌ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ…

8 hours ago