ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಿ.ಟಿ ದೇವೇಗೌಡರನ್ನ ಅರೆಸ್ಟ್ ಮಾಡಲು ಸಿದ್ಧತೆ ಮಾಡಿಕೊಂಡಿತ್ತು. ಕುಮಾರಸ್ವಾಮಿ ಇಲ್ಲದೇ ಹೋಗಿದ್ದರೆ, ಜಿ. ಟಿ. ದೇವೇಗೌಡ ಮತ್ತು ಅವರ ಪುತ್ರ ಜೈಲಿನಲ್ಲಿ ಕಾಲ ಕಳೆಯಬೇಕಾಗಿತ್ತು ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ 2017 ರಲ್ಲಿ ಜಿ.ಟಿ. ದೇವೇಗೌಡ ಅವರನ್ನು ಆರೆಸ್ಟ್ ಮಾಡಲು ಯೋಜನೆ ಹಾಕಿಕೊಂಡಿತು. ಈ ವಿಷಯ ಪೋಲಿಸ್ ಅಧಿಕಾರಿಗಳ ಮುಖಾಂತರ ನನಗೆ ಮುಟ್ಟಿತ್ತು. ಬಳಿಕ ಕುಮಾರಸ್ವಾಮಿ ಅವರು ಪೊಲೀಸರಿಗೆ ಕರೆ ಮಾಡಿ ಮಾತನಾಡಿದಾಗ, ಪೋಲಿಸರು ಜಿಟಿಡಿ ಅರೆಸ್ಟ್ ಮಾಡುವುದಕ್ಕೆ ಹಿಂದೇಟು ಹಾಕಿದರು. ಇಲ್ಲದೇ ಹೋಗಿದ್ರೆ ಜಿಟಿಡಿ ಮತ್ತು ಅವರ ಪುತ್ರ ನನ್ನ ಹಾಗೇ 20 ದಿನ ಜೈಲಿನಲ್ಲಿ ಕಳೆಯಬೇಕಾಗುವ ಸಂಭವವಿರುತ್ತಿತ್ತು ಎಂದು ಹೇಳಿದರು.
ಯಾವ ಕೇಸ್ ವಿಚಾರದಲ್ಲಿ ಎಂಬ ಪತ್ರಕರ್ತರ ಪ್ರಶ್ನೆಗೆ, ಈಗ ಅಧಿಕಾರದಲ್ಲಿರುವ ಕಾಂಗ್ರೆಸ್ ನಾಯಕರನ್ನು ಕೇಳಿ ಅಂತ ಕಾಂಗ್ರೆಸ್ ಮೇಲೆ ರೇವಣ್ಣ ಆರೋಪ ಮಾಡಿದರು.
ಇದೇ ವೇಳೆ ಜೆಡಿಎಸ್ ನಾಯಕ ಸುರೇಶ್ ಬಾಬು ಮಾತನಾಡಿ, ಜಿ.ಟಿ ದೇವೇಗೌಡರಿಗೆ ಪಕ್ಷದ ನಾಯಕರ ಮೇಲೆ ಅಸಮಾಧಾನ ಇರುವುದು ನಿಜ. ಆದರೆ ಅವರು ಕುರಿತು ಮಾತನಾಡಿದರೆ ಎಲ್ಲವೂ ಸರಿಯಾಗುತ್ತದೆ, ಮುಂದೆ ಸರಿಯಾಗುವ ವಿಶ್ವಾಸವಿದೆ ಎಂದು ಹೇಳಿದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…