ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಗೆ ಮುಂದಾದರೆ ದುಷ್ಪರಿಣಾಮ ಎದುರಿಸ ಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲಾ ಶೋಷಿತ ಸಮುದಾಯಗಳ ಜಿಲ್ಲಾ ಒಕ್ಕೂಟದ ಸಂಚಾಲಕ ಎಸ್. ಎಸ್. ಗಿರೀಶ್ ಕೆ. ರೇವಣಸಿದ್ದಪ್ಪ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಏನಾದರೂ ತೊಂದರೆಯಾದರೆ ರಾಜ್ಯದಲ್ಲಿ ದಂಗೆಯಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದರೇ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.
ರಾಜ್ಯದಲ್ಲಿ ಅಹಿಂದ ನಾಯಕರನ್ನ ತುಳಿಯೋ ಕೆಲಸ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಎಲ್ಲ ವರ್ಗದ ಜನರಿಗಾಗಿ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಳೆದುಕೊಂಡರೆ, ಮುಂದಿನ ದಿನಗಳಲ್ಲಿ ಅವರಂತಹ ಮುಖ್ಯಮಂತ್ರಿ ಯಾರೂ ಸಿಗುವುದಿಲ್ಲ. ಶೋಷಿತ ಸಮುದಾಯಗಳಿಗೆ ಸಿದ್ದರಾಮಯ್ಯರಿಂದ ಅನೇಕ ಕೆಲಸಗಳಾಗಬೇಕಿದೆ. ಒಂದು ವೇಳೆ ಅವರು ಅಧಿಕಾರದಿಂದ ಕೆಳಗಿಳಿದರೆ ರಾಜ್ಯದಲ್ಲಿ ದಂಗೆಯಾಗುತ್ತದೆ ಎಂದು
ಎಚ್ಚರಿಕೆ ನೀಡಿದ್ದಾರೆ.





