ರಾಜ್ಯ

ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ : ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ನಾನು ಪದೇ ಪದೆ ಹೇಳಿದ್ದೆ. ಆದರೂ ಆ ರೀತಿ ಇಲ್ಲ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಈಗ ಡಿ.ಕೆ.ಶಿವಕುಮಾರ್‌ ಸೋದರರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಸಿಎಂ ಬದಲಾವಣೆ ಇಲ್ಲವೆಂದ ಮೇಲೆ ಎಲ್ಲರೂ ಮಲ್ಲಿಕಾರ್ಜುನ ಖರ್ಗೆಯವನ್ನು ಏಕೆ ಭೇಟಿಯಾಗುತ್ತಿದ್ದಾರೆ? ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿದಿಲ್ಲ, ವನ್ಯಜೀವಿ-ಮಾನವ ಸಂಘರ್ಷ ಜೋರಾಗಿದೆ, ಮಳೆ ಹಾನಿ ಪರಿಹಾರ ನೀಡಿಲ್ಲ. ಹೀಗೆ ಅನೇಕ ಸಮಸ್ಯೆಗಳಿದ್ದರೂ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್‌ ಚೇರ್‌ ಸ್ಪರ್ಧೆ ನಡೆಯುತ್ತಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ ಸಿಗಲಿದೆ. ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ ಎಂದರು.

ಇದನ್ನು ಓದಿ: ಸಂಪುಟ ಪುನಾರಚನೆ ಆದರೆ ಸಿಎಂ ಬದಲಾವಣೆ ಆಗಲ್ಲ: ಸಚಿವ ಪರಮೇಶ್ವರ್‌

ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಬಗ್ಗೆ ಅರಣ್ಯ ಸಚಿವರು ಉತ್ತರ ನೀಡಬೇಕಿದೆ. ಇದು ಆಘಾತಕಾರಿ ಸಂಗತಿಯಾಗಿದ್ದು, ಈ ಬಗ್ಗೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ. ಬೆಳಗಾವಿ ಅಧಿವೇಶನದಲ್ಲಿ ಆರಂಭದಿಂದಲೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಕಳೆದ ಬಾರಿ ಚರ್ಚೆಯಾದ ಸಮಸ್ಯೆಗಳನ್ನು ಪರಿಹರಿಸಲಾಗಿದೆಯೇ ಎಂದು ತಿಳಿಸಬೇಕು. ಕಬ್ಬು ಬೆಳೆಗಾರರ ಸಮಸ್ಯೆ, ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಮಾಡಲಾಗುವುದು. ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ ಅವರ ಜೊತೆ ಈ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡಲಾಗುವುದು ಎಂದರು.

ಚಾಮರಾಜನಗರದಲ್ಲಿ ರೈತರನ್ನು ಭೇಟಿ ಮಾಡಿದ್ದು, ಬೆಳೆ ಪರಿಹಾರ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇನೆ. ಪರಿಹಾರ ನೀಡದೆಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಭಾಷಣ ಮಾಡುತ್ತಾರೆಯೇ ಹೊರತು ಪರಿಹಾರ ನೀಡುವುದಿಲ್ಲ. ಜಿಎಸ್‌ಟಿ ಸಮಿತಿಯ ಸಭೆಗೆ ಹೋಗದೆ, ಸಲಹೆ ನೀಡಬೇಕಾದ ಸಭೆಗೆ ಹೋಗದೆ ಈಗ ಇಲ್ಲಿ ಬಂದು ಆರೋಪ ಮಾಡುತ್ತಾರೆ. ಇರುವ ಅವಕಾಶಗಳನ್ನು ಬಳಸಿಕೊಳ್ಳದೆಯೇ ಈಗ ಮಾತಾಡಿ ಪ್ರಯೋಜನವಿಲ್ಲ. ಸಿಎಂ ಸಿದ್ದರಾಮಯ್ಯ ಮನವಿ ಕೊಟ್ಟು ಬಂದು ನಾಟಕವಾಡುತ್ತಿದ್ದಾರೆ. ಮನವಿ ಕೊಟ್ಟು ಹೊರಗೆ ಬಂದ ನಂತರ ವಂಚನೆಯಾಗಿದೆ ಎಂದು ಆರೋಪ ಮಾಡುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

31 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

33 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

35 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

39 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

43 mins ago