ರಾಜ್ಯ

ಕೇಂದ್ರ ಹಣ ಕೊಟ್ಟರೆ ದರ ಹೆಚ್ಚಿಸಲ್ಲ’; ಬೆಲೆ ಏರಿಕೆ ಅನಿವಾರ್ಯ ಎಂದ ಡಿಸಿಎಂ ಪರಮೇಶ್ವರ್‌!

ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್‌, ರಾಜ್ಯ ಸರ್ಕಾರಕ್ಕೆ ಕೆಲವು ದರ ಏರಿಕೆಗಳು ಅನಿವಾರ್ಯವಾಗಿವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಹಣವನ್ನು ನೀಡಿದರೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ. ಆಗ ದರ ಹೆಚ್ಚಿಸುವ ಅಗತ್ಯ ಬರುವುದಿಲ್ಲ ಎಂದರು.

ಕೇಂದ್ರದ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಪರಿಣಾಮವೂ ರಾಜ್ಯದ ಮೇಲೆ ಬೀರಿದೆ ಎಂದು ಆರೋಪಿಸಿದ ಅವರು, ರೈತರ ಪರವಾಗಿ ನಿಲ್ಲಬೇಕಾದ ಅಗತ್ಯವಿದೆ ಎಂದಿದ್ದಾರೆ. ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ ಎಂದೂ ಹೇಳಿರುವ ಪರಮೇಶ್ವರ್‌, ಕೇಂದ್ರ ಸಹಕಾರ ನೀಡಿದರೆ ದರ ಹೆಚ್ಚಿಸುವುದಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೆಚ್ಚುವರಿ ಮೀಸಲಾತಿಯನ್ನು ಹೈಕೋರ್ಟ್‌ ರದ್ದುಪಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, ಹೈಕೋರ್ಟ್‌ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ ಸಲ್ಲಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾನೂನನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವಂತೆ ಕೇಂದ್ರಕ್ಕೂ ಮನವಿ ಮಾಡುವುದಾಗಿ ಹೇಳಿದರು.

ತಮಿಳುನಾಡಿನಲ್ಲಿ ಶೇಕಡಾ 69ರಷ್ಟು ಮೀಸಲಾತಿ ಇದೆ ಎಂದು ಉಲ್ಲೇಖಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರವೇ ಈ ಕ್ರಮ ಕೈಗೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ಸದ್ಯ ನೇಮಕಾತಿಯಲ್ಲಿ ಗೊಂದಲ ಉಂಟಾಗಿದ್ದು, ಸುಪ್ರೀಂಕೋರ್ಟ್‌ನ ತೀರ್ಮಾನವನ್ನು ಕಾದು ನೋಡೋಣ ಎಂದು ಪರಮೇಶ್ವರ್‌ ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಸಾವಿನಂಚಿನಲ್ಲೂ ಸಾರ್ಥಕತೆ ಮೆರೆದ ಮಡಿಕೇರಿಯ ಯೋಗೇಶ್

ಮಡಿಕೇರಿ: ಮಗನನ್ನು ಕಳೆದುಕೊಳ್ಳುವ ನೋವಿನ ನಡುವೆಯೂ, ಆತನ ಅಂಗಾಂಗಗಳು ಮತ್ತೊಬ್ಬರ ಬದುಕಿಗೆ ಆಸರೆಯಾಗಲಿ ಎಂದು ಕುಟುಂಬವೊಂದು ಮಾನವೀಯ ನಿರ್ಧಾರ ಕೈಗೊಂಡಿದೆ.…

6 mins ago

ಪಿರಿಯಾಪಟ್ಟಣದಲ್ಲಿ ಮಲೆ ಮಹದೇಶ್ವರ ಜಾತ್ರೆಯ ಸಂಭ್ರಮ; ವಿಜೃಂಭಣೆಯ ರಥೋತ್ಸವ!

ಪಿರಿಯಾಪಟ್ಟಣ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.…

53 mins ago

ಹಾಸನಾಂಬೆ ದರ್ಶನಕ್ಕೆ ತೆರೆ; ಗರ್ಭಗುಡಿ ಬಾಗಿಲಿಗೆ ಬೀಗ!

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ನವೆಂಬರ್‌ 11ರ ಮಧ್ಯಾಹ್ನ ದೇವಾಲಯದ…

3 hours ago

ನಮ್ಮ ವಾಹನಗಳೂ ಹಾನಿಗೊಳಗಾಗಿವೆ’; ಎಥನಾಲ್‌ ಬಳಕೆ ವಿರುದ್ಧ ಸಿಎಂ ಡಿಕೆಶಿ ಆಕ್ರೋಶ!

ಮೈಸೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮೊದಲು ಪೆಟ್ರೋಲ್‌ಗೆ ಎಥನಾಲ್‌ ಮಿಶ್ರಣ…

4 hours ago

ಕೋರ್ಟ್‌ ಸೂಚನೆ ಬೆನ್ನಲ್ಲೇ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ!

ಬೆಂಗಳೂರು: ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಆರಂಭಿಸಲಾಗಿದೆ. ಕೋರ್ಟ್‌ ಸೂಚನೆಯ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ಚಿಕಿತ್ಸೆಗೆ ವ್ಯವಸ್ಥೆ…

4 hours ago

ನಾವು ಅವರ ಮಕ್ಕಳೇ ಬಿಡಿ; ವಿಜಯೇಂದ್ರಗೆ ಸಿಎಂ ಡಿಕೆಶಿ ತಿರುಗೇಟು!

ಮೈಸೂರು: ಕಾಂಗ್ರೆಸ್‌ ಕಾರ್ಯಕರ್ತರ ಕುರಿತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.…

4 hours ago