ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೆಹಲಿಗೆ ಹೋಗುತ್ತಿಲ್ಲ. ಅಧಿಕಾರ ಹಸ್ತಾಂತರ ಗೊಂದಲ ಬಗೆಹರಿಸಬೇಕು. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯರನ್ನು ಮುಂದುವರಿಸಬೇಕೋ ಅಥವಾ ಪುನಾರಚನೆ ಮಾಡಬೇಕೋ ನಿರ್ಧರಿಸಲಿ ಎಂದು ಹೇಳಿದರು.





