ರಾಜ್ಯ

ತಳ ಸಮುದಾಯದವರು ಕಾವ್ಯ ರಚಿಸಿದರೆ ಕಥೆ ಕಟ್ಟುತ್ತಾರೆ: ಸಿ.ಎಂ ಸಿದ್ದರಾಮಯ್ಯ

ಶಾಕುಂತಲಾ ಬರೆದ ಕಾಳಿದಾಸ ಕುರುಬ, ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು: ಸಿಎಂ

ಬೆಂಗಳೂರು : ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದ ವಾಲ್ಮೀಕಿ  ಹೆಮ್ಮೆ ಮತ್ತು ಮಾದರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು.

ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು.

ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು. ಬರೆದರು. ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದರು.

ರಾಮನ‌ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ ಎಂದರು.

SCSP/TSP ಮೂಲಕ SC/ST ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡ್ತೀನಿ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ SCSP/ TSP ಕಾಯ್ದೆಯನ್ನು ಜಾರಿಗೆ ತಂದಿಲ್ಲ ಏಕೆ ಎಂದು ಸಿಎಂ ಪ್ರಶ್ನಿಸಿದರು.

ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಎಂದು ಬಿಜೆಪಿ ಬಂಡವಾಳವನ್ನು ಬಿಚ್ಚಿಟ್ಟರು.

ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ.

ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ. ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ ಬಿಜೆಪಿ ಸುಳ್ಳುಗಳಿಗೆ ಸರಿಯಾದ ಉತ್ತರ ಕೊಡಿ. ಬಡ್ತಿಯಲ್ಲಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ‌ ಜನತೆ ಅರ್ಥಮಾಡಿಕೊಳ್ಳಬೇಕು ಎಂದರು.

ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲಾ ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು-ನೀವು ಸಲ್ಲಿಸುವ ಗೌರವ ಎಂದರು.

ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾ ನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, KKRDB ಅಧ್ಯಕ್ಷರಾದ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

11 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

12 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

13 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

13 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

14 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

14 hours ago